JOB | ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ 15 ಬೋಧಕ ಹುದ್ದೆಗಳಿಗೆ ನೇರಸಂದರ್ಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾರ್ಮಿಕರ ರಾಜ್ಯ ವಿಮಾ ನಿಗಮದ ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇರುವ 15 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ಈ ಹುದ್ದೆಗಳಿಗೆ ಗರಿಷ್ಟ 63 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,21,408 ರಿಂದ 2,11,878/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸೆಪ್ಟೆಂಬರ್‌ 11,2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:

ESIC Dental College, Kalaburagi-585106, Karnataka

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!