ಎಸ್ಸಾರ್ ಗ್ರೂಪ್ ಸಹ-ಸಂಸ್ಥಾಪಕ ಶಶಿಕಾಂತ್ ರೂಯಾ ನಿಧನ: ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತದ ಬಿಲಿಯನೇರ್​ಗಳಲ್ಲಿ ಒಬ್ಬರೆನಿಸಿದ್ದ ಹಾಗೂ ಎಸ್ಸಾರ್ ಗ್ರೂಪ್​ನ ಸಹ-ಸಂಸ್ಥಾಪಕರಾದ ಶಶಿಕಾಂತ್ ರೂಯಾ ಸೋಮವಾರ ತಡರಾತ್ರಿ ನಿಧನರಾಗಿದ್ದಾರೆ.

ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಕುಟುಂಬ ಮೂಲಗಳು ಮಾಧ್ಯಮಗಳಿಗೆ ತಿಳಿಸಿದ ಮಾಹಿತಿ ಪ್ರಕಾರ ಸೋಮವಾರ ಮಧ್ಯರಾತ್ರಿ 11:55ಕ್ಕೆ ಕೊನೆಯುಸಿರೆಳೆದಿದ್ದಾರೆ. ಇತ್ತೀಚಿನ ವರ್ಷಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿತ್ತು. ಚಿಕಿತ್ಸೆಗಾಗಿ ಅಮೆರಿಕಕ್ಕೂ ಹೋಗಿದ್ದರು. ಕಳೆದ ತಿಂಗಳಷ್ಟೇ ಅವರು ಭಾರತಕ್ಕೆ ವಾಪಸ್ಸಾಗಿದ್ದರು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು, ಉದ್ಯಮಿಗಳು ಶಶಿ ರೂಯಾ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ‘ಉದ್ಯಮ ವಲಯದಲ್ಲಿ ಶಶಿಕಾಂತ್ ರೂಯಾ ಅವರದ್ದು ಮೇರು ವ್ಯಕ್ತಿತ್ವ. ತಮ್ಮ ಬದ್ಧತೆಯಿಂದ ಅವರು ಭಾರತದಲ್ಲಿ ಬಿಸಿನೆಸ್ ಸ್ವರೂಪವನ್ನು ಬದಲಿಸಿದ್ದರು. ಅವರ ಸಾವು ನಿಜಕ್ಕೂ ಬೇಸರ ತಂದಿದೆ. ಅರ ಕುಟುಂಬ ಹಾಗೂ ಪ್ರೀತಿಪಾತ್ರರಿಗೆ ನನ್ನ ಸಂತಾಪಗಳಿರುತ್ತವೆ’ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!