March 7, 2026
Saturday, March 7, 2026
spot_img

60 ಕೋಟಿ ರೂ. ವೆಚ್ಚದಲ್ಲಿ ನೂತನ 10 GTTC ಕೇಂದ್ರಗಳ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು,60 ಕೋಟಿ ರೂ. ವೆಚ್ಚದಲ್ಲಿ ನೂತನ10 GTTC ( ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ) ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.

ಅಷ್ಟೇ ಅಲ್ಲದೆ ಕಾರ್ಮಿಕರ ಮಕ್ಕಳಿಗಾಗಿ ನೂತನ 62 ವಸತಿ ಶ್ರಮಿಕ ಶಾಲೆ ಆರಂಭಿಸಲಾಗುತ್ತದೆ. ಒಟ್ಟು 104 ಶಾಲೆಗಳ ಆರಂಭಕ್ಕೆ ಆದ್ಯತೆ ನೀಡಲಾಗುತ್ತದೆ.

ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ ತೆರೆಯಲಾಗುತ್ತದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಕಾಡೆಮಿ ಸ್ಥಾಪನೆ, ಕಾರ್ಮಿಕರ ವಿಮಾ ಸೊಸೈಟಿಯಿಂದ ಹುಬ್ಬಳ್ಳಿ, ಇಂದಿರಾನಗರ,ಮೈಸೂರು, ದೊಡ್ಡ ಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !