ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ದೇಶೀಯ ಉತ್ಪಾದನೆ ಬಗ್ಗೆ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.
ದೇಶೀಯ ಉತ್ಪಾದನೆಯನ್ನು ಹೆಚ್ಚಿಸಲು, ಆಮದು ಅವಲಂಬನೆಯನ್ನು ಕಡಿಮೆ ಮಾಡಲು 3 ಮೀಸಲಾದ ರಾಸಾಯನಿಕ ಪಾರ್ಕ್ಗಳನ್ನು ಸ್ಥಾಪಿಸುವ ಪ್ರಸ್ತಾಪವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು.



