ಹೊಸದಿಗಂತ ಡಿಜಿಟಲ್ ಡೆಸ್ಕ್ :
ಬೆಂಗಳೂರಿನಲ್ಲಿ ಡ್ರ್ಯಾಗನ್ ಫ್ರೂಟ್ ಸಂಶೋಧನೆ ಹಾಗೂ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸುವುದಾಗಿ ಕೇಂದ್ರ ಕೃಷಿ ಸಚಿವಾಲಯ ಶುಕ್ರವಾರ ಪ್ರಕಟಣೆ ಹೊರಡಿಸಿದೆ.
ಬೆಂಗಳೂರಿನ ಹಿರೇಹಳ್ಳಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರಾಯೋಗಿಕ ಕೇಂದ್ರದಲ್ಲಿ ಡ್ರ್ಯಾಗನ್ ಫ್ರೂಟ್ ಸಂಶೋಧನಾ ಕೇಂದ್ರವು ಸ್ಥಾಪನೆಯಾಗಲಿದೆ.
ಕೇಂದ್ರ ಸರ್ಕಾರದ ಪ್ರಾಯೋಜಿತ ಇಂಟೆಗ್ರೇಟೆಡ್ ಡೆವಲಪ್‌ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಈ ಕೇಂದ್ರವನ್ನು ಪ್ರಾರಂಭಿಸಲಾಗುತ್ತದೆ ಎಂದು ಸಚಿವಾಲಯದ ಪ್ರಕಟಣೆ ಹೇಳಿದೆ.
ಡ್ರ್ಯಾಗನ್ ಫ್ರೂಟ್ ಉತ್ಪಾದನೆ, ಮೌಲ್ಯವರ್ಧನೆ ಮತ್ತು ರೈತ ಸಮುದಾಯದ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುವಲ್ಲಿ ಕೇಂದ್ರವು ಸ್ವಾವಲಂಬನೆ ಸಾಧಿಸುವ ಗುರಿ ಹೊಂದಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.