ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿರುವ 205 ಮುಜರಾಯಿ ದೇಗುಲಗಳಲ್ಲಿ ಮಕ್ಕಳಿಗೆ ಹಾಲುಣಿಸಲು ಕೇಂದ್ರಗಳನ್ನು ತೆರೆಯಲಾಗುವುದು.
ಹೌದು, ಈ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದು, ದೇಗುಲಗಳಲ್ಲಿ ತಾಯಂದಿರು ಮಕ್ಕಳಿಗೆ ಹಾಲುಣಿಸಲು ಕೊಠಡಿಗಳಿಲ್ಲದೆ ಮುಜುಗರ ಮಾಡಿಕೊಳ್ಳುತ್ತಾರೆ. ಇಂಥದ್ದನ್ನು ಗಮನದಲ್ಲಿಟ್ಟುಕೊಂಡು ಹಾಲುಣಿಸುವ ಕೊಠಡಿಗಳನ್ನು ತೆರೆಯಲಾಗುವುದು ಎಂದಿದ್ದಾರೆ.
ರಾಜ್ಯದ ಎಲ್ಲ ಎ ದರ್ಜೆ ದೇವಾಲಯಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ. ಜಾತ್ರೆ, ಹಬ್ಬ ಹರಿದಿನಗಳಲ್ಲಿ ದೇಗುಲಗಳಲ್ಲಿ ದೇವರ ದರುಶನಕ್ಕೆ ಸಾಕಷ್ಟು ತಾಯಂದಿರು ಆಗಮಿಸುತ್ತಾರೆ. ಎಳೆ ಮಕ್ಕಳಿಗೆ ಹಾಲುಣಿಸಲು ಮುಜುಗರ ಪಟ್ಟುಕೊಳ್ಳುತ್ತಾರೆ. ಅವರಿಗೆ ಸಹಾಯವಾಗಲಿ ಎಂದು ಸರ್ಕಾರ ಮಹತ್ವದ ತೀರ್ಮಾನ ಕೈಗೆತ್ತುಕೊಂಡಿದೆ ಎಂದಿದ್ದಾರೆ.