ಕಲಬುರಗಿಯಲ್ಲಿ ಮೆಗಾ ಟೆಕ್ಸಟೈಲ್ ಪಾರ್ಕ್ ಸ್ಥಾಪನೆಗೆ ಪ್ರಥಮ ಆದ್ಯತೆ: ಸಚಿವ ನಿರಾಣಿ

ಹೊಸದಿಗಂತ ವರದಿ,ಕಲಬುರಗಿ:

ಮೆಗಾ ಟೆಕ್ಸಟೈಲ್ ಪಾರ್ಕ್ ಕಲಬುರಗಿಯಲ್ಲಿ ಸ್ಥಾಪನೆಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ್ ನಿರಾಣಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಲಬುರಗಿ ಹಾಗೂ ವಿಜಯಪುರದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇತ್ತೀಚೆಗೆ ದೆಹಲಿಗೆ ಹೋದ ಸಂದರ್ಭದಲ್ಲಿ ಈ ಕುರಿತು ಕೇಂದ್ರ ಜವಳಿ ಸಚಿವ ಪಿಯೂಷ್ ಗೊಯಲ್ ಅವರಲ್ಲಿ ಮನವಿ ಮಾಡಲಾಗಿದೆ ಎಂದರು.

ಪಾರ್ಕ್ ಸ್ಥಾಪನೆಗೆ ಅಗತ್ಯವಿರುವ ಭೂಮಿ ಎರಡು ಜಿಲ್ಲೆಗಳಲ್ಲಿ ಸಿದ್ಧವಿದೆ. ವಿಜಯಪುರದಲ್ಲಿ 3000 ಎಕರೆ ಪ್ರದೇಶದ ಭೂಮಿ ಇದೆ. ಹಾಗೂ ಕಲಬುರಗಿಯ ಹೊನ್ನಕಿರಣಗಿಯಲ್ಲಿ ಇರುವ ಕರ್ನಾಟಕ ಪವರ್ ಕಾರ್ಪೊರೇಷನ್ ಅವರ 1600 ಎಕರೆ ಭೂಮಿಯನ್ನು ಇಂಡಸ್ಟ್ರಿ ಗೆ ಪಡೆಯಲಾಗುವುದು. ಪವರ್ ಕಾರ್ಪೊರೇಷನ್ ಅವರಿಗೆ ಬೇರೆಡೆ ಭೂಮಿ ಒದಗಿಸಲಾಗುವುದು ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!