Thursday, August 18, 2022

Latest Posts

ಮಕ್ಕಳ ಆರೋಗ್ಯ ವೃದ್ಧಿಗಾಗಿ ಎನ್‌ಆರ್‌ಸಿ ಕೇಂದ್ರಗಳ ಸ್ಥಾಪನೆ: ಡಾ. ವೆಂಕಟೇಶ್

ಹೊಸ ದಿಗಂತ ವರದಿ, ಮಡಿಕೇರಿ:

ಪೌಷ್ಟಿಕಾಂಶದ ಕೊರತೆಯಿಂದ ಮಕ್ಕಳು ಕ್ರೋನಿಕ್ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಈ ಸಂಬಂಧ ಮಕ್ಕಳಲ್ಲಿ ಆರೋಗ್ಯ ವೃದ್ಧಿಗಾಗಿ ರಾಷ್ಟ್ರೀಯ ಪೌಷ್ಟಿಕ ಪುನಶ್ಚೇತನ (ಎನ್‌ಆರ್‌ಸಿ) ಕೇಂದ್ರಗಳನ್ನು ತೆರೆಯಲಾಗಿದ್ದು, ಪೌಷ್ಟಿಕಾಂಶದ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ಆರೈಕೆ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಹೇಳಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಜಿಲ್ಲಾ ಆರೋಗ್ಯ ಮ್ತತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ರಾಷ್ಟ್ರೀಯ ಪೌಷ್ಟಿಕ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪೌಷ್ಟಿಕ ಆಹಾರದ ಮಹತ್ವದ ಕುರಿತು ಅರಿವು ಮೂಡಿಸುವ ಸಲುವಾಗಿ ರಾಷ್ಟ್ರೀಯ ಪೌಷ್ಟಿಕ ಮಾಸಾಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು
ಪೌಷ್ಟಿಕಾಂಶ ಕೊರತೆ ಇರುವ ಮಕ್ಕಳನ್ನು ಎನ್‌ಆರ್‌ಸಿ (ರಾಷ್ಟ್ರೀಯ ಪೌಷ್ಟಿಕ ಪುನಶ್ಚೇತನ) ಕೇಂದ್ರಗಳಲ್ಲಿ ದಾಖಲು ಮಾಡುವ ಪೋಷಕರಿಗೆ 7 ರಿಂದ 14 ದಿನಗಳವರೆಗೆ ಉಚಿತ ಊಟ ಮತ್ತು ಕೂಲಿ ಕಾರ್ಮಿಕರ ಸಂಬಳವನ್ನು ಸಹ ಭರಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಕೊಡಗು ಜಿಲ್ಲಾ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಕಾರ್ಯಪ್ಪ ಅವರು ಮಾತನಾಡಿ, ಮಕ್ಕಳ ಆರೋಗ್ಯದ ಕುರಿತು ಪೋಷಕರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದರು.
ಎನ್‌ಆರ್‌ಸಿ ಕೇಂದ್ರಗಳಲ್ಲಿ ತಾಯಂದಿರಿಗೆ ಹಾಗೂ ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದಂತೆ ಅಗತ್ಯ ಪ್ರಮಾಣದ ಆಹಾರ ಪದಾರ್ಥ ಹಾಗೂ ಎದೆ ಹಾಲುಣಿಸುವಿಕೆಯ ಕುರಿತು ಎಲ್ಲಾ ರೀತಿಯ ಮಾಹಿತಿಯನ್ನು ನೀಡಿ ಆರೈಕೆ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಜಿಲ್ಲಾ ಕೋವಿಡ್ ಆಸ್ಪತ್ರೆಯ ಅಧೀಕ್ಷಕ ಡಾ.ಮಂಜುನಾಥ್, ಕೊಡಗು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ವಿಶಾಲ್ ಕುಮಾರ್, ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ, ಡಾ.ಕುಶ್ವಂತ್ ಕೋಳಿಬೈಲು, ಎನ್‌ಆರ್‌ಸಿ ವಿಭಾಗದ ವೈದ್ಯಾಧಿಕಾರಿ ಡಾ.ಡಾಲಿ ಪ್ರಿಯದರ್ಶಿನಿ, ಪೌಷ್ಟಿಕ ಪುನಶ್ಚೇತನ ಶುಶ್ರೂಷಕರು, ಕೌನ್ಸಿಲರ್‌ಗಳು ಇದ್ದರು.
ಪೌಷ್ಟಿಕ ಮಾಸಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪ್ರಜ್ಞಾ ಪ್ರಾರ್ಥಿಸಿದರೆ, ಡಾ.ಪೂಜಾ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!