Thursday, August 18, 2022

Latest Posts

ಆಕ್ಸಿಜನ್ ಸಮಸ್ಯೆ ನೀಗಿಸಲು ಮಿಮ್ಸ್-ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕ ಸ್ಥಾಪನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸ ದಿಗಂತ ವರದಿ, ಮಂಡ್ಯ :

ಕೋವಿಡ್ ಅಲೆಯಿಂದ ಉಂಟಾಗಿರುವ ಆಕ್ಸಿಜನ್ ಸಮಸ್ಯೆ ನೀಗಿಸಲು ಮಿಮ್ಸ್ ಹಾಗೂ ಮಳವಳ್ಳಿ ತಾಲೂಕು ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಘಟಕ ಸ್ಥಾಪನೆಗೆ ಸರ್ಕಾರ ಮುಂದಾಗಿದ್ದುಘಿ, ಉಳಿದ 5 ತಾಲೂಕು ಕೇಂದ್ರಗಳಲ್ಲೂ ಶೀಘ್ರ ಆಮ್ಲಜನಕ ತಯಾರಿಕಾ ಘಟಕ ಸ್ಥಾಪನೆಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ನಡೆದ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಿತ್ಯ 8 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳ ರೋಗಿಗಳೂ ಸಹ ಮಂಡ್ಯ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಸಂಕಷ್ಟ ಪರಿಸ್ಥಿತಿಯನ್ನು ನಿಯಂತ್ರಿಸುವುದು ಕಷ್ಟಕರವಾಗಿದೆ. ಬಹುತೇಕ ರೋಗಿಗಳಿಗೆ ಆಕ್ಸಿಜನ್ ಕೊರತೆಯದ್ದೇ ಸಮಸ್ಯೆಯಾಗಿದೆ. ಇದನ್ನು ಸರಿದೂಗಿಸುವ ಕೆಲಸವನ್ನು ಜಿಲ್ಲಾಡಳಿತ, ನಮ್ಮ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಹೇಳಿದರು.
ಆಕ್ಸಿಜನ್ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸುವ ಸಲುವಾಗಿ ಮಿಮ್ಸ್ ಆವರಣದಲ್ಲಿ 500 ಎಲ್‌ಪಿಎಂ ಆಕ್ಸಿಜನ್ ಘಟಕ ಹಾಗೂ ಮಳವಳ್ಳಿ ತಾಲೂಕು ಆಸ್ಪತ್ರೆ ಆವರಣದಲ್ಲಿ 390 ಎಲ್‌ಪಿಎಂ ಸಾಮರ್ಥ್ಯದ ಘಟಕ ಸ್ಥಾಪನೆಗೆ ಸಿದ್ಧತೆ ನಡೆಸಲಾಗಿದೆ. ಉಳಿದ 5 ತಾಲೂಕುಗಳಲ್ಲೂ ಶೀಘ್ರ ಆಕ್ಸಿಜನ್ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಆಕ್ಸಿಜನ್ ಘಟಕ ಅಳವಡಿಸಲು 6 ರಿಂದ 8 ವಾರಗಳ ಕಾಲಾವಕಾಶ ಅಗತ್ಯವಿದೆ. ಅಷ್ಟರಲ್ಲಿ ಬೇರೆ ಮೂಲದಿಂದ ಆಕ್ಸಿಜನ್ ಸರಬರಾಜು ಮಾಡಲು ಯೋಜನೆ ರೂಪಿಸುತ್ತಿರುವುದಾಗಿ ತಿಳಿಸಿದರು.
ಮಿಮ್ಸ್ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಹೆಚ್ಚಿನ ಬೆಡ್‌ಗಳನ್ನು ಅಳವಡಿಸಲಾಗಿದೆ. ಆದರೆ ಆಕ್ಸಿಜನ್ ಕೊರತೆಯಿಂದಾಗಿ ಅವುಗಳಿಗೆ ಇನ್ನೂ ಚಾಲನೆ ನೀಡಿಲ್ಲಘಿ. ಹೆಚ್ಚುವರಿ ಆಕ್ಸಿಜನ್ ಸರಬರಾಜಿಗೆ ಸರ್ಕಾರ ಸಹಮತ ವ್ಯಕ್ತಪಡಿಸಿದ್ದು, ಶೀಘ್ರ ಹೆಚ್ಚುವರಿ ರೋಗಿಗಳಿಗೆ ಹಾಸಿಗೆ ನೀಡಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!