ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರೋಮಿಯೋ ಸ್ಕ್ವ್ಯಾಡ್ ಸ್ಥಾಪನೆ: ಸಿಎಂ ಯೋಗಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ತಮ್ಮ ಪಕ್ಷ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಆಯಂಟಿ ರೋಮಿಯೋ ಸ್ಕ್ವ್ಯಾಡ್(ರೋಮಿಯೋ ವಿರೋಧಿ ದಳ)​ ಸ್ಥಾಪಿಸಲಾಗುವುದು. ಈ ಮೂಲಕ ತೃಣಮೂಲ ಕಾಂಗ್ರೆಸ್​ನ ರೋಮಿಯೋಗಳನ್ನ ಕಂಬಿಯ ಹಿಂದಕ್ಕೆ ಕಳುಹಿಸಲಾಗುವುದು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಇಂದು ಬಿರುಸಿನ ಪ್ರಚಾರ ನಡೆಸಿದ ಅವರು,ಪಶ್ಚಿಮ ಬಂಗಾಳದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ರಕ್ಷಣೆಗಾಗಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಆಯಂಟಿ ರೋಮಿಯೋ ಸ್ಕ್ವ್ಯಾಡ್ ಸ್ಥಾಪಿಸಲಾಗುವುದು ಮತ್ತು ಟಿಎಂಸಿಯ ರೋಮಿಯೋಗಳನ್ನ ಕಂಬಿ ಹಿಂದಕ್ಕೆ ಕಳುಹಿಸಲಾಗುವುದು ಎಂದಿದ್ದಾರೆ. ಅಲ್ಲದೇ ಇದೇ ವೇಳೆ ಸಿಎಎ ಪ್ರತಿಭಟನೆಗಳು ನಡೆಯುವ ಸಮಯದಲ್ಲಿ ಟಿಎಂಸಿ ಕಾರ್ಯಕರ್ತರು ಹಿಂಸೆಗೆ ಪ್ರಚೋದನೆ ನೀಡಿದರು ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss