ರಾಜ್ಯ ಬಜೆಟ್| ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್‌ ಅನ್ನು ಮಂಡಿಸುತ್ತಿದ್ದು, ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಬಜೆಟ್​​​ನಲ್ಲಿ ಘೋಷಣೆ ಮಾಡಿದ್ದಾರೆ.

ಜೊತೆಗೆ ಕಾಡಾನೆ ಹಾವಳಿ ತಡೆಗೆ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ರಚಿಸಿರುವ ಕಾಡಾನೆ ಕಾರ್ಯಪಡೆಯನ್ನು ಮೈಸೂರು ಹಾಗೂ ಮಂಡ್ಯಕ್ಕೂ ವಿಸ್ತರಿಸಿ ಹೊಸದಾಗಿ 199 ಸಿಬ್ಬಂದಿ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!