ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜುಲೈ 24ರಿಂದ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರ ಚಾತುರ್ಮಾಸ್ಯ ವ್ರತಾಚರಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ವರದಿ,ಕಾಸರಗೋಡು:

ಎಡನೀರು ಶ್ರೀ ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಒಂದನೆಯ ಚಾತುರ್ಮಾಸ್ಯ ವ್ರತಾಚರಣೆಯು ಜುಲೈ 24 ರಿಂದ ವಿವಿಧ ಧಾರ್ಮಿಕ, ತಾಂತ್ರಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎಡನೀರು ಶ್ರೀ ಮಠದಲ್ಲಿ ಆರಂಭಗೊಳ್ಳಲಿದೆ. ಜು.24 ಶನಿವಾರ ಗುರುಪೂರ್ಣಿಮಾ ಪುಣ್ಯ ದಿನದಂದು ವ್ಯಾಸ ಪೂಜೆಯೊಂದಿಗೆ ಪ್ರಾರಂಭವಾಗುವ ಚಾತುರ್ಮಾಸ್ಯವು ಸೆಪ್ಟೆಂಬರ್ 20 ಸೋಮವಾರದಂದು ಸಮಾಪ್ತಿಗೊಳ್ಳಲಿದೆ.
ಚಾತುರ್ಮಾಸ್ಯ ಕಾರ್ಯಕ್ರಮಗಳ ಯಶಸ್ವಿಗಾಗಿ ಊರ ಪರವೂರ ಭಕ್ತಾದಿಗಳ ಸಮಿತಿಯನ್ನು ರೂಪಿಸಲಾಗಿದೆ. ಸಮಿತಿಗೆ ಟಿ.ಶ್ಯಾಮ ಭಟ್ ಅಧ್ಯಕ್ಷರಾಗಿ, ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಪ್ರಧಾನ ಕಾರ್ಯದರ್ಶಿಯಾಗಿ, ಕೆಯ್ಯೂರು ನಾರಾಯಣ ಭಟ್ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಆಗಸ್ಟ್ 26 ರಂದು ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರ ಆರಾಧನಾ ಮಹೋತ್ಸವವು ಎಡನೀರು ಮಠದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss