ಹೊಸದಿಗಂತ ವರದಿ ಕಲಘಟಗಿ:
ಕಲಘಟಗಿ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಬುಡನಾಳ ಬಳಿ ಶುಕ್ರವಾರ ಸಂಜೆ ಎಥನಾಲ್ ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್‌ವೊಂದು ನಿಂತಿದ್ದ ಟ್ರ್ಯಾಕ್ಟರ್ ಹಾಗೂ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಮಧ್ಯೆಯೇ ಪಲ್ಟಿಯಾದ ಘಟನೆ ಸಂಭವಿಸಿದೆ.
ರಭಸವಾಗಿ ಬಂದ ಟ್ಯಾಂಕರ್ ನಿಯಂತ್ರಣ ತಪ್ಪಿ ನಿಂತಿದ್ದ ಟ್ರ್ಯಾಕ್ಟರ್ ಮತ್ತು ಕಾರಿಗೆ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ರಸ್ತೆ ಮಧ್ಯೆ ಪಲ್ಟಿಯಾಗಿದೆ. ವಾಹನಗಳ ಚಾಲಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.



