ನೈತಿಕ ಮತದಾನ ನಮ್ಮ ಆದ್ಯ ಕರ್ತವ್ಯ : ಡಾ ಕೆ .ವಿ ರಾಜೇಂದ್ರ

ಹೊಸದಿಗಂತ ವರದಿ ಮೈಸೂರು :

ವಿಧಾನ ಸಭಾ ಚುನಾವಣೆಯಲ್ಲಿ ಪಾಲ್ಗೊಂಡು ದೇಶದ ಪ್ರತಿಯೊಬ್ಬ ಪ್ರಜೆಯು ಕೂಡ ಮತದಾನವನ್ನು ಮಾಡಬೇಕು. ಪ್ರತಿಯೊಬ್ಬರು ಮತದಾನದಲ್ಲಿ ಜೊತೆಗೂಡಿ ಸಕ್ರಿಯ ಮತದಾನವನ್ನು ಮಾಡಿ ನೈತಿಕ ಮತದಾನ ನಮ್ಮ ಆದ್ಯ ಕರ್ತವ್ಯವಾಗಿದೆ. ಮತದಾನಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಅರಮನೆ ಮುಂಭಾದದಲ್ಲಿ ಅಯೋಜಿಸಿದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಚುನಾವಣೆಯಲ್ಲಿ ಪಾಲ್ಗೊಂಡು ಮತದಾನವನ್ನು ಮಾಡಿ ನಿಮ್ಮ ಅಕ್ಕಪಕ್ಕದಲ್ಲಿನ ಸಾರ್ವಜನಿಕರಲ್ಲಿಯೂ ಕೂಡ ಮತದಾನದ ಬಗ್ಗೆ ಅರಿವು ಮೂಡಿಸಿ ಎಂದರು.

ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಯುವ ಮತದಾರರ ಸಂಖ್ಯೆ ಹೆಚ್ಚಿದೆ, ಪ್ರತಿಯೊಬ್ಬ ಯುವ ಮತದಾರರು ಕೂಡ ಈ ಬಾರಿಯ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿ ಎಂದರು. ಏಪ್ರಿಲ್ 1ಕ್ಕೆ 18 ವರ್ಷ ತುಂಬಿದ ಯುವಕ ಯುವತಿಯರಿಗೂ ಈ ಬಾರಿ ಮತದಾನವನ್ನು ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಪ್ರತಿಯೊಬ್ಬರು ಚುನಾವಣಾ ಪಟ್ಟಿಯನ್ನು ನೋಡಿಕೊಂಡು ಮತದಾನದಲ್ಲಿ ಪಾಲ್ಗೊಳ್ಳಿ ಎಂದು ತಿಳಿಸಿದರು.

ಮತದಾರರ ಪಟ್ಟಿಯಿಂದ ಹೆಸರುಗಳು ಕೈ ಬಿಟ್ಟು ಹೋಗದಂತೆ ಮತ್ತು ಮರಣ ಹೊಂದಿದವರ ಪಟ್ಟಿಯ ಬಗ್ಗೆ ಗಮನಹರಿಸಬೇಕು. 80 ವರ್ಷ ಮೇಲ್ಪಟ್ಟಿದ್ದು, ಮತಗಟ್ಟೆಗೆ ಬಂದು ಮತ ಹಾಕಲು ಸಾಧ್ಯವಾಗದವರಿಗೆ 12ಡಿ ಮೂಲಕ ಮತದಾನ ಮಾಡಲು ಅವಕಾಶವಿದೆ. ಸಿ-ವಿಜಿಲ್ ಆಫ್ ಮೂಲಕ ಚುನಾವಣಾ ಸಂಬಂಧಿತ ದಾಖಲಾದ ದೂರುಗಳಿಗೆ ನೂರು ನಿಮಿಷಗಳಲ್ಲಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ಜಿಲ್ಲೆಯ ಮತದಾರರಲ್ಲಿ ಮತದಾನ ಮಾಡುವ ಕುರಿತು ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯ ಐಕಾನ್ ಆಗಿ ನೇಮಕವಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ಷೇತ್ರದಲ್ಲಿ ಖ್ಯಾತಿ ಹೊಂದಿರುವ ಜಾವಗಲ್ ಶ್ರೀನಾಥ್ ಅವರು ಮಾತನಾಡಿ ಪ್ರಜಾಪ್ರಭುತ್ವ ನಿರ್ಮಾಣವಾಗುವುದು ಕೇವಲ ಮತದಾನದಿಂದ. ಪ್ರತಿಯೊಬ್ಬ ಪ್ರಜೆಯ ಮತದಾನವು ಕೂಡ ಉತ್ತಮ ಪ್ರಜಾಪ್ರಭುತ್ವ ನಿರ್ಮಾಣ ಮಾಡಲು ಸಾಧ್ಯವಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಅಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ.ಗಾಯಿತ್ರಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಾಟ್ಕರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ವೀಕಲ ಚೇತನರು ಮತ್ತು ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!