ಊಹೆಯ ಆಧಾರದ ಮೇಲೆ ಎತ್ತಿನಹೊಳೆ ಯೋಜನೆ ರೂಪಿಸಲಾಗಿದೆ: ಸಿಟಿ ರವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಎತ್ತಿನಹೊಳೆ ಯೋಜನೆಯು ಅವೈಜ್ಞಾನಿಕ, ಊಹೆಯ ಆಧಾರದ ಮೇಲೆ ರೂಪಿಸಲಾಗಿದ್ದು, ಯೋಜನೆಯ ಮೂಲದಲ್ಲೇ ಲೋಪವಾಗಿದೆ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಆರೋಪಿಸಿದ್ದಾರೆ.

ಈ ಬಗ್ಗೆ ಸಿಎಂಗೆ ಪತ್ರ ಬರೆದಿದ್ದು, ಎತ್ತಿನಹೊಳೆ ಯೋಜನೆಯಲ್ಲಿ ಸಾವಿರಾರು ಕೋಟಿ ರೂಪಾಯಿ ದುರುಪಯೋಗವಾಗಿದೆ.‌ ಅಕ್ರಮ ವಿರುದ್ಧ ಕ್ರಮಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

ನೀರಿನ ಲಭ್ಯತೆ, ಪೂರೈಕೆ, ಕೊಟ್ಟ ಭರವಸೆ ಬಗ್ಗೆ ಗೊಂದಲಗಳಿವೆ. ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವೈಜ್ಞಾನಿಕ ಸಂಸ್ಥೆಗಳು, ತಾಂತ್ರಿಕ ಸಂಸ್ಥೆ ಮತ್ತು ಐಐಎಸ್ಸಿ ಸಂಸ್ಥೆ ನೆರವಿನಿಂದ ಸಮಗ್ರ ಅಧ್ಯಯನ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ ಕುರಿತಂತೆ 7 ಜಿಲ್ಲೆಯ ಜನರ ಪರವಾಗಿ ನಿಮಗೊಂದು ಬಹಿರಂಗ ಪತ್ರ. ಎತ್ತಿನಹೊಳೆ ಯೋಜನೆ ಕುರಿತಂತೆ ತಾವು ಮತ್ತು ಉಪಮುಖ್ಯಮಂತ್ರಿಗಳು ನೀಡಿದ ಸಾರ್ವಜನಿಕ ಹೇಳಿಕೆ ಮತ್ತು ಜಾಹೀರಾತನ್ನು ನೋಡಿ, ನಮಗಿರುವ ಸಾರ್ವಜನಿಕರ ಆತಂಕವನ್ನು ದೂರ ಮಾಡಬೇಕೆಂದು ಆಗ್ರಹಿಸಿ ಈ ಕೆಲವು ಪ್ರಶ್ನೆಗಳನ್ನು ಕೇಳಲು ಬಯಸುತ್ತೇನೆ.

ಆರಂಭದಲ್ಲಿ ಈ ಯೋಜನೆಯ ಉದ್ದೇಶವೇ ನಿರಂತರ ಬರದ ದವಡೆಗೆ ಸಿಲುಕಿರುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ ಮತ್ತು ರಾಮನಗರ ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸುವುದು. 38 ಪಟ್ಟಣಗಳಿಗೆ, 6,657 ಗ್ರಾಮಗಳಿಗೆ, 527 ಕೆರೆ ತುಂಬಿಸುವುದು, 75 ಲಕ್ಷ ಜನರಿಗೆ, ಶುದ್ಧ ಕುಡಿಯುವ ನೀರು, ಆಗಿತ್ತು. ಇದಕ್ಕಾಗಿ ಆರಂಭಿಕ ಯೋಜನೆ ಮೊತ್ತ 8,323 ಕೋಟಿ. ನಂತರ ಪರಿಷ್ಕೃತ ಮೊತ್ತ 12912 ಕೋಟಿ ರೂ. ಗಳು. ಈಗ ಮತ್ತೊಮ್ಮೆ ಮೊತ್ತವನ್ನು ಪರಿಷ್ಕೃತ 23,251 ಕೋಟಿ ರೂ.ಗೆ ಹೆಚ್ಚಳ ಮಾಡಿದ್ದೀರಿ. ಈಗಾಗಲೇ ನೀವೆ ಹೇಳಿರುವ ಹಾಗೆ ದಿನಾಂಕ 30.06.2024 ರವರೆಗೆ ರೂ. 16,076 ಕೋಟಿ ವೆಚ್ಚವನ್ನು ಮಾಡಿದ್ದೀರಿ. ಈಗ ಮಾಡಿರುವ ವೆಚ್ಚದಲ್ಲಿ ಎಷ್ಟು ಹಳ್ಳಿಯ ಜನರಿಗೆ ಕುಡಿಯುವ ನೀರು, ಎಷ್ಟು ಕೆರೆಗಳಿಗೆ ನೀರು ತುಂಬಿಸುತ್ತೀರಿ? ಸ್ಪಷ್ಟಪಡಿಸಿ ಎಂದು ಬರೆದಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!