Thursday, September 4, 2025

ಪ್ರಧಾನಿ ಮೋದಿ ಜೊತೆ ಯುರೋಪಿಯನ್ ಕೌನ್ಸಿಲ್ ಮುಖ್ಯಸ್ಥೆ ಮಹತ್ವದ ಮಾತುಕತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಷ್ಯಾ ಉಕ್ರೇನ್ ಮೇಲಿನ ತನ್ನ ಆಕ್ರಮಣಕಾರಿ ಯುದ್ಧವನ್ನು ಕೊನೆಗೊಳಿಸುವಲ್ಲಿ ಮತ್ತು ಶಾಂತಿಯತ್ತ ಮಾರ್ಗವನ್ನು ಸೃಷ್ಟಿಸುವಲ್ಲಿ ಸಹಾಯ ಮಾಡಲು ಹಾಗೂ ರಷ್ಯಾದ ಮನವೊಲಿಸಲು ಭಾರತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಹೇಳಿದ್ದಾರೆ.

ಇಂದು ಸಂಜೆ ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಹಾಗೂ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಇಬ್ಬರೂ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.

“ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯೊಂದಿಗೆ ಭಾರತದ ನಿರಂತರ ಸಂಪರ್ಕವನ್ನು ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ. ರಷ್ಯಾ ತನ್ನ ಆಕ್ರಮಣಕಾರಿ ಯುದ್ಧವನ್ನು ಕೊನೆಗೊಳಿಸಲು ಮತ್ತು ಶಾಂತಿಯತ್ತ ಮಾರ್ಗವನ್ನು ರಚಿಸಲು ಸಹಾಯ ಮಾಡುವಲ್ಲಿ ಭಾರತವು ಪ್ರಮುಖ ಪಾತ್ರವನ್ನು ವಹಿಸುತ್ತದೆ” ಎಂದು ವಾನ್ ಡೆರ್ ಲೇಯೆನ್ ಹೇಳಿದ್ದಾರೆ.

ಇದನ್ನೂ ಓದಿ