ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್‌ನಲ್ಲಿ ತನ್ನ ವಿಶಿಷ್ಟ ಪಾತ್ರಗಳ ಮೂಲಕ ಗುರುತಿಸಿಕೊಂಡ ನಟಿ ಎವೆಲಿನ್ ಶರ್ಮಾ ಅವರ ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದೆ. ಹಲವು ದಿನಗಳಿಂದ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿರುವ ಅವರು, ಪತಿ ತುಶಾನ್ ಭಿಂಡಿ ಜೊತೆಗಿನ ದಾಂಪತ್ಯ ಜೀವನ ಅಂತ್ಯಗೊಂಡಿರುವುದನ್ನು ಅಧಿಕೃತವಾಗಿ ಬಹಿರಂಗಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಎವೆಲಿನ್, ಪರಸ್ಪರ ಒಪ್ಪಿಗೆಯೊಂದಿಗೆ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಜೀವನದಲ್ಲಿ ಬೇರೆ ದಾರಿಯನ್ನು ಆರಿಸಿಕೊಂಡಿದ್ದರೂ, ಮಕ್ಕಳ ಪಾಲನೆ-ಪೋಷಣೆಯಲ್ಲಿ ಇಬ್ಬರೂ ಜೊತೆಯಾಗಿ ಜವಾಬ್ದಾರಿ ಹೊರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:
ತಮ್ಮ ಹೊಸ ಬದುಕಿನ ಅಧ್ಯಾಯವನ್ನು ಗೌರವ, ಸ್ನೇಹ ಮತ್ತು ಪೋಷಕರ ಕರ್ತವ್ಯದ ಆಧಾರದಲ್ಲಿ ಕಟ್ಟಿಕೊಳ್ಳಲು ಮುಂದಾಗಿದ್ದೇವೆ ಎಂದು ಅವರು ಹೇಳಿದ್ದಾರೆ. ಜೊತೆಗೆ, ಈ ಸೂಕ್ಷ್ಮ ಸಂದರ್ಭದಲ್ಲಿ ಖಾಸಗಿತನಕ್ಕೆ ಗೌರವ ನೀಡುವಂತೆ ಮನವಿ ಮಾಡಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ಗಮನಾರ್ಹ ಹೆಸರು ಮಾಡಿದ ಎವೆಲಿನ್, ಮದುವೆಯ ಬಳಿಕ ಕುಟುಂಬ ಜೀವನಕ್ಕೆ ಹೆಚ್ಚು ಆದ್ಯತೆ ನೀಡಿದ್ದರು. ಈಗ ಅವರ ಈ ಘೋಷಣೆ ಸಿನಿರಂಗದಲ್ಲಿ ಚರ್ಚೆಗೆ ಕಾರಣವಾಗಿದೆ.



