ಅಂತೂ ಸೆರೆಸಿಕ್ಕ ಚಿರತೆ: ಸಿಲಿಕಾನ್ ಸಿಟಿ ಜನರ ಆತಂಕ ದೂರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಮೂರು ದಿನಗಳಿಂದ ಸಿಲಿಕಾನ್ ಸಿಟಿ ಜನರ ನಿದ್ದೆಗೆಡಿಸಿದ ಚಿರತೆ ಕೊನೆಗೂ (Leopard) ಅರಣ್ಯ ಇಲಾಖೆ ಅಧಿಕಾರಿಗಳು (Leopard Operation) ಸತತ ಕಾರ್ಯಾಚರಣೆ ನಂತರ ಸೆರೆಹಿಡಿದಿದ್ದಾರೆ.

ಅರವಳಿಕೆ ಮದ್ದು ನೀಡಿದ ನಂತರವೂ ಅರೆಪ್ರಜ್ಞಾವಸ್ಥೆಯಲ್ಲಿದ್ದ ಚಿರತೆ ಪಶುವೈದ್ಯರ ಮೇಲೂ ದಾಳಿ ನಡೆಸಿತ್ತು. ಕೊನೆಗೂ ಹರಸಾಹಸಪಟ್ಟು ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು. ಬಳಿಕ ಅರವಳಿಕೆ ತಜ್ಞ ಕಿರಣ್‌ ಅವರನ್ನು ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ಕರೆದೊಯ್ದರು. ನಂತರ ಲೆಪರ್ಡ್ಸ್ ಟಾಸ್ಕ್‌ಫೋರ್ಸ್‌ ವಾಹನಕ್ಕೆ ಚಿರತೆಯನ್ನು ಶಿಫ್ಟ್ ಮಾಡಿ ಕರೆದೊಯ್ಯಲಾಯಿತು.

ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಚಿರತೆಯೊಂದು ಓಡಾಡಿತ್ತು. ರಾತ್ರಿ 11 ಗಂಟೆಗೆ ಕಾಂಪೌಂಡ್ ಗೋಡೆ ಜಿಗಿದು ಓಡಿದ್ದನ್ನು ಪರಪ್ಪನ ಅಗ್ರಹಾರ ಲಾ ಅಂಡ್ ಆರ್ಡರ್ ಪೊಲೀಸರು ಗಮನಿಸಿದ್ದರು. ಮರುದಿನ ಅಲ್ಲಿ ಚಿರತೆಯ ಹೆಜ್ಜೆಗಳು ಪತ್ತೆಯಾಗಿತ್ತು. ಕಡೆಂಜಾ ಅಪಾರ್ಟ್ಮೆಂಟ್‌ನಲ್ಲಿ ಮಧ್ಯಾಹ್ನದ ಹೊತ್ತಿಗೆ ಚಿರತೆ ಮೆಟ್ಟಿಲು ಹತ್ತಿ ಹೋಗುವುದು ಸಿಸಿ ಟಿವಿಯಲ್ಲೂ ಸೆರೆಯಾಗಿತ್ತು.

ಈ ಎಲ್ಲ ಘಟನಾವಳಿಗಳ ಹಿನ್ನೆಲೆಯಲ್ಲಿ ಸೋಮವಾರ ಸಂಜೆಯಿಂದಲೇ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಂದು ದಿನವಾದರೂ ಚಿರತೆಯನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಈ ನಡುವೆ ಮಂಗಳವಾರ ಸಂಜೆ ಥರ್ಮಲ್ ತಂತ್ರಜ್ಞಾನದ ಡ್ರೋಣ್ ಮೂಲಕ ಕಾರ್ಯಾಚರಣೆ ನಡೆಸಲಾಯಿತು. ಈ ತಂತ್ರಜ್ಞಾನ ಆ ಪ್ರದೇಶದಲ್ಲಿ ಚಿರತೆ ಇರುವುದರ ಸುಳಿವು ನೀಡಿದ್ದರೂ ಸರಿಯಾಗಿ ಗುರುತಿಸಲು ಸಾಧ್ಯವಾಗಿರಲಿಲ್ಲ.ಮಂಗಳವಾರ ಸಂಜೆಯವರೆಗೂ ಚಿರತೆಗಾಗಿ ಇಡೀ ಕಟ್ಟಡ ಜಾಲಾಡಿದ್ದ ಅಧಿಕಾರಿಗಳಿಗೆ ಹೆಚ್ಚಿನ ಸುಳಿವು ಸಿಕ್ಕಿರಲಿಲ್ಲ. ಆದ್ರೆ ಗೋಡೆಯ ವೇಲೆ ಓಡಾಡಿದ್ದ ಗುರುತು ಪತ್ತೆಯಾಗಿತ್ತು. ಪಾಳು ಬಿದ್ದ ಕಟ್ಟಡದ ಸುತ್ತಮುತ್ತಲಿನ ಕಡೆ ಅರಣ್ಯ ಇಲಾಖೆ ಅಧಿಕಾರಿಗಳು ಕಣ್ಣಿಟ್ಟಿದ್ದರು.

ಬುಧವಾರ ಮುಂಜಾನೆ ಮತ್ತೆ ಶುರು ಮಾಡಿದರು. ಸಾರ್ವಜನಿಕರು ರಸ್ತೆಯಲ್ಲಿ ಓಡಾಡದಂತೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿತ್ತು. ಕೃಷ್ಣಾರೆಡ್ಡಿ ಇಂಡಸ್ಟ್ರಿಯಲ್ ಏರಿಯಾಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಮುಚ್ಚಲಾಗಿತ್ತು.ಬುಧವಾರದ ಕಾರ್ಯಾಚರಣೆಗೆ ಮೈಸೂರಿನ ವಿಶೇಷ ತಂಡವನ್ನು ಕರೆಸಿಕೊಳ್ಳಲಾಗಿತ್ತು. ಹುಣಸೂರಿನಿಂದ ಆಗಮಿಸಿದ ವನ್ಯ ಜೀವಿ ರಕ್ಷಣಾ ತಂಡ ಪಾಳುಬಿದ್ದಿರುವ ಕಟ್ಟಡದಲ್ಲಿ ಕಾರ್ಯಾಚರಣೆ ನಡೆಸಿತ್ತು. ವಿಶೇಷವೇನೆಂದರೆ ವನ್ಯಜೀವಿ ಸಂರಕ್ಷಣಾ ವಿಭಾಗದ ಶಾರ್ಪ್ ಶೂಟರ್ಸ್ ಸಹ ಎಂಟ್ರಿ ಕೊಟ್ಟಿದ್ದರು. ಇವರ ಸಹಾಯದಿಂದ ಚಿರತೆಗೆ ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!