ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಆದ ಬಳಿಕ ಒಂದೊಂದೇ ಬೇಡಿಕೆ ಇಡುತ್ತಿರುವ ದರ್ಶನ್ ಇದೀಗ ಚೇರ್‌ಗೆ ಬೇಡಿಕೆ ಇಟ್ಟಿದ್ದು, ದರ್ಶನ್ ಬೇಡಿಕೆಗೆ ಜೈಲಧಿಕಾರಿಗಳು ತಣ್ಣೀರು ಎರಚಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಿಂದಾಸ್ ಆಗಿ ಎಂಜಾಯ್ ಮಾಡುತ್ತಿದ್ದ ಕೊಲೆ ಆರೋಪಿ ದರ್ಶನ್‌ಗೆ ಬಳ್ಳಾರಿ ಸೆಂಟ್ರಲ್ ಜೈಲು ನರದಕರ್ಶನ ಮಾಡಿಸುತ್ತಿದೆ. ಮ್ಯಾನುವಲ್ ಬಿಟ್ಟು ಹೆಚ್ಚುವರಿಯಾಗಿ ಅದೇನೇ ಬೇಡಿಕೆ ಇಟ್ಟರೂ ಜೈಲಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ.
ಸರ್ಜಿಕಲ್ ಕಮೋಡ್, ವಿಟಮಿನ್ ಟ್ಯಾಬ್ಲೇಟ್ ಹಾಗೂ ಟಿವಿ ಬಳಿಕ ಇದೀಗ ಕುಳಿತುಕೊಳ್ಳೋಕೆ ಚೇರ್‌ಗಾಗಿ ದರ್ಶನ್ ಬೇಡಿಕೆ ಇಟ್ಟಿದ್ದಾರೆ. ಆದರೆ ದರ್ಶನ್‌ಗೆ ಜೈಲಧಿಕಾರಿಗಳು ನಿಜ ಜೈಲು ಹೇಗಿರುತ್ತದೆ ಎಂಬ ರುಚಿಯನ್ನು ತೋರಿಸುತ್ತಿದ್ದಾರೆ.