ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೋದಿ ಮುಖ ನೋಡಿನೂ ಬಿಜೆಪಿಗೆ ಬಹುಮತ ಸಿಕ್ಕಿಲ್ಲ, ಹೇಳಬೇಕಂದ್ರೆ ನರೇಂದ್ರ ಮೋದಿಗೆ ಪ್ರಧಾನಿಯಾಗುವ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಷ್ಟ್ರಮಟ್ಟದಲ್ಲಿಯೂ ಕಾಂಗ್ರೆಸ್ ಮತ ಪ್ರಮಾಣ ಹೆಚ್ಚಾಗಿದೆ. ಕೇಂದ್ರದಲ್ಲಿ ಅಧಿಕಾರಿದಲ್ಲಿದ್ದ ಬಿಜೆಪಿ 2014 ಹಾಗೂ 2019ಕ್ಕಿಂತ ಕಡಿಮೆ ಸೀಟು ಗಳಿಸಿದೆ. ಮೋದಿ ಮುಖ ನೋಡಿಯೂ ಬಿಜೆಪಿಗೆ ಬಹುಮತ ಬಂದಿಲ್ಲ. ಬಿಜೆಪಿ ಸರಳ ಬಹುಮತ ಪಡೆಯುವಲ್ಲೂ ಸೋತಿದೆ, ಸರ್ಕಾರ ಯಾರು ಮಾಡ್ತಾರೆ ಅನ್ನೋದನ್ನು ಈಗಲೇ ಹೇಳೋಕೆ ಸಾಧ್ಯ ಇಲ್ಲ ಎಂದಿದ್ದಾರೆ.
ವಿರೋಧ ಪಕ್ಷದ ನಾಯಕರು, ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿದರು. ಇಡಿ, ಐಟಿ, ಸಿಬಿಐ ಹೆಸರಲ್ಲಿ ಹೆದರಿಸಿದರು, ಬೆದರಿಸಿದರು. ಆದರೂ ದೇಶದ ಜನ ಬಿಜೆಪಿಗೆ ಬಹುಮತ ಕೊಡಲಿಲ್ಲ. ಈ ಸೋಲಿನ ಕಾರಣದಿಂದ ಮೋದಿ ಮತ್ತೆ ಪ್ರಧಾನಿ ಆಗುವ ನೈತಿಕ ಹಕ್ಕು ಹೊಂದಿಲ್ಲ ಎಂದಿದ್ದಾರೆ.