ಅರ್ಧವಾರ್ಷಿಕ ಪರೀಕ್ಷೆ ಮುಗಿದರೂ ಮಕ್ಕಳಿಗಿಲ್ಲ ಶೂ, ಸಾಕ್ಸ್: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷದ ಅರ್ಧವಾರ್ಷಿಕ ಪರೀಕ್ಷೆಗಳು ಮುಗಿದಿದ್ದರೂ ಇನ್ನು ಅನೇಕ ಕಡೆಗಳಲ್ಲಿ ಶೂ, ಸಾಕ್ಸ್ ವಿತರಿಸದ ಸರ್ಕಾರದ ನಡೆಯನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ. ಬಡವರ ಹೆಸರಿನಲ್ಲಿ ರಾಜಕಾರಣ ಮಾಡುವ ಕಾಂಗ್ರೆಸ್ ಸರ್ಕಾರಕ್ಕೆ ಶಾಲಾ ಮಕ್ಕಳ ಕನಿಷ್ಠ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಬೆಂಗಳೂರಿನ ಸರ್ಕಾರಿ ಶಾಲೆಗಳ ಸುಮಾರು 22,210ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳಿಗೆ … Continue reading ಅರ್ಧವಾರ್ಷಿಕ ಪರೀಕ್ಷೆ ಮುಗಿದರೂ ಮಕ್ಕಳಿಗಿಲ್ಲ ಶೂ, ಸಾಕ್ಸ್: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ