ಸುಗ್ರೀವಾಜ್ಞೆ ಜಾರಿಗೆ ತಂದರೂ ನಿಲ್ಲದ ಮೈಕ್ರೋ ಫೈನಾನ್ಸ್ ಹಾವಳಿ: ಹುಬ್ಬಳ್ಳಿಯಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಕಾನೂನು ಜಾರಿಗೆ ತಂದರೂ ಸಹ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ನಿಂತಿಲ್ಲ. ಇದೀಗ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿದ್ದು, ವ್ಯಕ್ತಿಯೋಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರನಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಿವಾನಂದ್ (36) ಎಂದು ತಿಳಿದುಬಂದಿದೆ. ಶಿವಾನಂದ್ ಕಾರ್ತಿಕ್ ಬಳ್ಳಾರಿ ಎಂಬುವವರಿಂದ 4 ಲಕ್ಷ ಸಾಲ ಪಡೆದಿದ್ದರು. 4 ಲಕ್ಷಕ್ಕೆ 4 ಲಕ್ಷ ಬಡ್ಡಿ ಕಟ್ಟಿದ್ದರು. ಆದರೆ ಸಾಲ ಮರುಪಾವತಿ ಮಾಡಿದ್ದರೂ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಲೇ ಇದ್ದರು. ಇದರಿಂದ ಬೇಸತ್ತ ಶಿವಾನಂದ್ ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!