Monday, March 4, 2024

ಲೋಕಸಭೆ ಚುನಾವಣೆ ಮುಗಿಯುವವರೆಗೂ ಯಾರೂ ವಿಶ್ರಾಂತಿ ಪಡೆಯುವಂತಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಮುಂದಿರುವ ಗುರಿ ಲೋಕಸಭಾ ಚುನಾವಣೆ. ಈ ಚುನಾವಣೆ ಬಂದು ಮುಗಿಯುವವರೆಗೂ ನಾವು ವಿಶ್ರಾಂತಿ ಪಡೆಯುವಂತಿಲ್ಲ. ಮನೆಯಲ್ಲಿ ಕುಳಿತುಕೊಳ್ಳುವ ಸಂದರ್ಭ ಉದ್ಭವಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಶನಿವಾರ ನಡೆದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಎದುರಾಳಿಗಳನ್ನು ಹಗುರವಾಗಿ ತೆಗೆದುಕೊಳ್ಳದೆ, ನಮ್ಮ ಸಾಧನೆಗಳನ್ನು ಜನರ ಮುಂದಿಟ್ಟು, ಹಗಲು ರಾತ್ರಿ ಪಕ್ಷದ ಗೆಲುವಿಗಾಗಿ ಶ್ರಮ ಹಾಕಬೇಕಾಗಿದೆ ಎಂದರು.

ಒಂದು ದಿನವೂ ವಿಶ್ರಾಂತಿಯನ್ನು ತೆಗೆದುಕೊಳ್ಳದೆ, ನಮ್ಮ ಪ್ರಧಾನಮಂತ್ರಿಗಳು ದೇಶದ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮಾಡಿದ್ದಾರೆ. ಈ ಮೂಲಕ ಇವತ್ತು ಭಾರತವನ್ನು ಮುನ್ನಡೆಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರಿಂದ, ಕಾರ್ಯಕರ್ತರಿಗಾಗಿ, ಕಾರ್ಯಕರ್ತರಿಗೋಸ್ಕರ ಇರುವ ಪಕ್ಷ ಎಂದು ವಿವರಿಸಿದರು.

ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್, ಪ್ರಲ್ಹಾದ್ ಜೋಶಿ, ರಾಜೀವ್ ಚಂದ್ರಶೇಖರ್, ಭಗವಂತ ಖೂಬಾ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್, ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!