ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆಯಷ್ಟೇ ಬೆಂಗಳೂರಿಗರ ಫೇವರೆಟ್ ಇಡ್ಲಿ ತಿನ್ನೋದ್ರಿಂದ ಕ್ಯಾನ್ಸರ್ ಬರಬಹುದು ಎನ್ನುವ ಅಂಶ ಬಯಲಿಗೆ ಬಂದಿತ್ತು. ಇದೀಗ ಜನರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಆರೋಗ್ಯಕರವಾದ್ದು ಎಂದು ತಿನ್ನುವ ಬಟಾಣಿಯಲ್ಲಿಯೂ ಕ್ಯಾನ್ಸರ್‌ಕಾರಕ ಅಂಶ ಪತ್ತೆಯಾಗಿದೆ.
ಹಸಿರು ಬಟಾಣಿಯಲ್ಲೂ ಕ್ಯಾನ್ಸರ್ ಕಾರಕ ಪತ್ತೆಯಾಗಿರುವ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ವರದಿ ನೀಡಿದೆ. ಈಗ ಹಸಿರು ಬಟಾಣಿಗೆ ನಿಷೇಧ ಕಲರ್‌ಗಳನ್ನ ಬಳಕೆ ಮಾಡ್ತಿರೋದು ಪತ್ತೆಯಾಗಿದೆ. ಈಗಾಗಲೇ ರಾಜ್ಯಾದ್ಯಂತ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಪರೀಕ್ಷೆಗೆ ಒಳಪಡಿಸಿದೆ. ಅದರಲ್ಲಿ 8 ರಿಂದ 10 ಕಡೆ ಕ್ಯಾನ್ಸರ್ ಕಾರಕ ಬಣ್ಣ ಬಳಕೆ ಮಾಡ್ತಿರೋದು ಪತ್ತೆಯಾಗಿದೆ.
ಇನ್ನೂ ಇಡ್ಲಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರೋ ಹಿನ್ನೆಲೆ ಸಚಿವ ದಿನೇಶ್ ಗುಂಡೂರಾವ್ ಇವತ್ತು ಮಹತ್ವದ ಸುದ್ದಿಗೋಷ್ಠಿ ಮಾಡಲಿದ್ದಾರೆ. ಆಹಾರ ತಯಾರಿಕೆ ಮತ್ತು ಆಹಾರ ಪಾರ್ಸೆಲ್ ಕೊಡೋದಕ್ಕೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ಅಧಿಕೃತ ಆದೇಶ ಮಾಡುವ ಸಾಧ್ಯತೆ ಇದೆ. ಇದರ ಜೊತೆ ಹಸಿರು ಬಟಾಣಿಗೆ ಕಲರ್ ಲೇಪನ ಸಂಬಂಧ ಕ್ರಮದ ಬಗ್ಗೆ ಅನೌನ್ಸ್ ಮಾಡುವ ಸಾಧ್ಯತೆ ಇದೆ.