ಹೊಸದಿಗಂತ ವರದಿ ಹುಬ್ಬಳ್ಳಿ:
ಹೈಕಮಾಂಡ್ ನಿಂದ ಮಾತ್ರ ಮುಖ್ಯಮಂತ್ರಿ ಬದಲಾವಣೆ ಮಾಡಲು ಸಾಧ್ಯವಿದ್ದು, ಬೀದಿ ದಾಸಯ್ಯನನ್ನು ಮುಖ್ಯಮಂತ್ರಿ ಮಾಡಿದರೂ ನಾವು ಒಪ್ಪಬೇಕಾಗುತ್ತದೆ. ಕಾಂಗ್ರೆಸ್ ಹೈಕಮಾಂಡ್ ಪಕ್ಷ ಎಂದು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. 2028ರ ವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಹೈಕಮಾಂಡ್ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿದರೆ ನಮ್ಮದೇನು ಅಭ್ಯಂತರವಿಲ್ಲ.ಈ ವಿಷಯದಲ್ಲಿ ನಾವು ನಮ್ಮ ಅಭಿಪ್ರಾಯ ಹೇಳಿದ್ದೆವೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.
ನವೆಂಬರ್ ಹಾಗೂ ಡಿಸೆಂಬರ್ ಕ್ರಾಂತಿ ಎಲ್ಲವೂ ಬಿಜೆಪಿ ಅವರ ಹೇಳಿಕೆ ಮಾತ್ರ. ಈಗ ಸಂಕ್ರಾಂತಿ ಮುಗಿದಿದ್ದು, ಮುಂದೆ ಯುಗಾದಿ ಹಬ್ಬಕ್ಕೆ ಕಾಯುತ್ತಿದ್ದಾರೆ. ಆದರೆ ಏನು ಆಗುವುದಿಲ್ಲ ಎಂದು ತಿಳಿಸಿದರು.


