ಬ್ರಹ್ಮ ಬಂದು ಹೇಳಿದರೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸೋದು ಖಚಿತ: ಕೆ.ಎಸ್.ಈಶ್ವರಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬ್ರಹ್ಮ ಬಂದು ಹೇಳಿದರೂ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ದಿಸೋದು ಖಚಿತ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಅಮಿತ್‌ ಶಾ ಕರೆಯ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರು ದೆಹಲಿಗೆ ತೆರಳಿದ್ದರು, ಆದರೆ ಅಮಿತ್‌ ಶಾ ಅವರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಇದಾದ ಬಳಿಕ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ ಅವರು, ಕೇಂದ್ರ ಗೃಹಸಚಿವರು ಭೇಟಿಗೆ ಸಿಕ್ಕಿಲ್ಲ. ನಾನು ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದಿದ್ದಾರೆ.

ಗೃಹ ಸಚಿವರು ನನಗೆ ಕರೆ ಮಾಡಿ ಮಾತನಾಡಿದ್ದರು. ಬುಧವಾರ ದೆಹಲಿಗೆ ಬನ್ನಿ ಎಂದಿದ್ದರು. ಅದಕ್ಕೇ ನಾನು ದೆಹಲಿಗೆ ಬಂದೆ. ಆದರೆ ದೆಹಲಿ ತಲುಪಿದ ಬಳಿಕ ಅಮಿತ್ ಶಾ ಅವರ ಕಚೇರಿಯಿಂದ ಅಮಿತ್ ಶಾ ಅಲಭ್ಯರಾಗಿದ್ದಾರೆ ಎಂಬ ಸಂದೇಶ ರವಾನೆಯಾಗಿದೆ. ಇದರರ್ಥ ನಾನು ಚುನಾವಣೆಯಲ್ಲಿ ಭಾಗವಹಿಸಬೇಕು. ಬಿ.ವೈ. ರಾಘವೇಂದ್ರ ಅವರನ್ನು ಸೋಲಿಸಲೇಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!