ದೆಹಲಿ ಮುಳುಗಿದರೂ ಸಿಎಂ ಗೆ ತಿರುಗಾಟ ಮುಖ್ಯ: ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಬಿಜೆಪಿ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ಪ್ರವಾಹ ಬಂದು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅತ್ತ ಮುಂಬರಲು ಲೋಕಸಭಾ ಚುನಾವಣೆಗೆ ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಸಭೆ ನಡೆಸುತ್ತಿದ್ದಾರೆ.

ಆಮ್‌ ಆದ್ಮಿ ಪಾರ್ಟಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಕೂಡ ಬೆಂಗಳೂರಿಗೆ ಆಗಮಿಸಿದ್ದಾರೆ. ಹೀಗಾಗಿ ದೆಹಲಿ ಬಿಜೆಪಿ ಕೇಜ್ರಿವಾಲ್‌ ಅವರನ್ನು ಟೀಕಿಸಿದೆ.

ಯಮುನಾ ನದಿ ಅಪಾಯದ ಮಟ್ಟ ಮೀರಿದ್ದರಿಂದ ಇಡೀ ದೆಹಲಿ ನೀರಿನಲ್ಲಿ ಮುಳುಗಿಹೋಗಿದೆ. ಈ ಕ್ಷಣ ರಾಜ್ಯ ಮುಖ್ಯಮಂತ್ರಿಯಾಗಿ ಜನರ ನೆರವಿಗೆ, ಅವರ ಪರಿಹಾರ ಕಾರ್ಯಗಳ ಮೇಲ್ವಿಚಾರಣೆಯನ್ನು ಮಾಡಬೇಕು. ಆದರೆ, ಸಿಎಂ ಸಮಸ್ಯೆಗಳನ್ನು ಕಡೆಗಣಿಸಿ ರಾಜ್ಯದ ಹೊರಗೆ ತಿರುಗಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೆಹಲಿ ಸಿಎಂ ಜನರ ಸಮಸ್ಯೆಗಳನ್ನು ಕಡೆಗಣಿಸಿ ವಿರೋಧ ಪಕ್ಷಗಳ ಸಭೆಗೆ ಹಾಜರಾಗಿದ್ದಾರೆ ಎಂದು ಬಿಜೆಪಿ ಮುಖಂಡ ವೀರೇಂದ್ರ ಸಚ್‌ದೇವ್ ಆರೋಪಿಸಿದ್ದಾರೆ. ಒಬ್ಬ ಭ್ರಷ್ಟ ವ್ಯಕ್ತಿ ಇಡೀ ಭ್ರಷ್ಟರ ಸೈನ್ಯವನ್ನು ಭೇಟಿಯಾಗಲು ಹೋಗಿದ್ದಾನೆ ಎಂದು ಟೀಕಿಸಿದ್ದಾರೆ.

ದೆಹಲಿ ಜನರನ್ನು ಕಷ್ಟದಲ್ಲಿ ಬಿಟ್ಟು, ದುಷ್ಟರ ಗುಂಪಿಗೆ ಸೇರಿರುವ ಭ್ರಷ್ಟ ಕೇಜ್ರಿವಾಲ್ ಅವರನ್ನು ದೆಹಲಿ ಜನತೆ ಕ್ಷಮಿಸುವುದಿಲ್ಲ ಎಂದು ಕುಲ್ಜಿತ್ ಸಿಂಗ್ ಚಹಾಲ್ ಟ್ವೀಟ್‌ ಮಾಡಿದ್ದಾರೆ.

ಯಮುನಾ ನದಿಯ ನೀರಿನ ಮಟ್ಟ ಏರಿಕೆಯಿಂದ ದೆಹಲಿಯ ಜನರು ತೊಂದರೆ ಅನುಭವಿಸುತ್ತಿರುವ ಸಮಯದಲ್ಲಿ ಕೇಜ್ರಿವಾಲ್ ದೆಹಲಿಯಿಂದ ನಾಪತ್ತೆಯಾಗಿದ್ದಾರೆ ಎಂದು ಬಿಜೆಪಿ ನಾಯಕ ಪ್ರವೀಣ್ ಸಾಹೇಬ್ ಸಿಂಗ್ ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!