ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಂಗ್ ಕಮಾಂಡರ್ ಯುವಕನ ಮೇಲೆ ಹಲ್ಲೆ ವಿಚಾರವಾಗಿ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ. ವಿಂಗ್ ಕಮಾಂಡರ್ ಆಗಲಿ ಯಾರೇ ಆಗಲಿ ತಪ್ಪು ತಪ್ಪೇ, ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಅದ್ದಿಹಳ್ಳಿ ಹೆಲಿಪ್ಯಾಡ್‌ನಲ್ಲಿ ವಿಂಗ್ ಕಮಾಂಡರ್ ಯುವಕನ ಮೇಲೆ ಹಲ್ಲೆ ವಿಚಾರಕ್ಕೆ ಅವರು ಪ್ರತಿಕ್ರಿಯೆ ನೀಡಿದರು. ಈಗಾಗಲೇ ಈ ಪ್ರಕರಣ ಸಂಬಂಧ ದೂರು ದಾಖಲಾಗಿದೆ. ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಆಗುತ್ತದೆ. ವಿಂಗ್ ಕಮಾಂಡರ್ ತಪ್ಪು ಮಾಡಿದ್ರೂ ತಪ್ಪೇ. ಸೂಕ್ತ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದರು.