ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ 2026ರಲ್ಲಿ ಭಾರತ ತಂಡ ಭರ್ಜರಿ ಸಾಧನೆ ಮಾಡಿದ್ದು, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಈ ಗೆಲುವಿನ ನಡುವೆಯೇ ಮುಂದಿನ ದಿನಗಳಲ್ಲಿ ಭಾರತ ಟಿ20 ತಂಡದ ನಾಯಕತ್ವದಲ್ಲಿ ಬದಲಾವಣೆ ಸಂಭವಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.
ಬಿಸಿಸಿಐ 2026ರ ಟಿ20 ವಿಶ್ವಕಪ್‌ಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಿತ್ತು. ಈಗ ಅವರಿಗೆ 35 ವರ್ಷ ವಯಸ್ಸಾಗಿರುವುದರಿಂದ ಮುಂದಿನ ಟಿ20 ವಿಶ್ವಕಪ್ ವೇಳೆಗೆ ಅವರು ತಂಡದಲ್ಲಿ ಇರದಿರುವ ಸಾಧ್ಯತೆ ಇದೆ ಎಂದು ಕ್ರಿಕೆಟ್ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಈ ಕಾರಣದಿಂದ ಮುಂದಿನ ದಿನಗಳಲ್ಲಿ ಹೊಸ ನಾಯಕನನ್ನು ಆಯ್ಕೆ ಮಾಡುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸುತ್ತಿದೆ.
ಇದನ್ನೂ ಓದಿ:
ಇದಕ್ಕೂ ಮೊದಲು 2024ರ ಟಿ20 ವಿಶ್ವಕಪ್ ಬಳಿಕ ರೋಹಿತ್ ಶರ್ಮಾ ನಾಯಕತ್ವದಿಂದ ಹಿಂದೆ ಸರಿದಿದ್ದರು. ಅದೇ ರೀತಿಯ ಪರಿಸ್ಥಿತಿ ಸೂರ್ಯಕುಮಾರ್ ಯಾದವ್ ಅವರಿಗೂ ಎದುರಾಗಬಹುದು ಎನ್ನಲಾಗುತ್ತಿದೆ. ಆದರೂ ಅವರು ಟಿ20 ತಂಡದಲ್ಲಿ ಆಟಗಾರನಾಗಿ ಮುಂದುವರಿಯುವ ಆಸಕ್ತಿ ವ್ಯಕ್ತಪಡಿಸಿದ್ದಾರೆ.
ಇತ್ತ ಟೆಸ್ಟ್ ಹಾಗೂ ಏಕದಿನ ತಂಡದ ನಾಯಕನಾಗಿರುವ ಶುಭ್ಮನ್ ಗಿಲ್ ಅವರಿಗೆ ಟಿ20 ನಾಯಕತ್ವ ನೀಡುವ ಸಾಧ್ಯತೆಗಳಿವೆ. ಆದರೆ ಅದಕ್ಕಾಗಿ ಅವರು ಮೊದಲು ಟಿ20 ತಂಡಕ್ಕೆ ಮರಳಬೇಕು. ಈ ಹಿನ್ನೆಲೆಯಲ್ಲಿ ಐಪಿಎಲ್‌ನಲ್ಲಿ ಅವರ ಪ್ರದರ್ಶನ ಪ್ರಮುಖವಾಗಿದ್ದು, ಉತ್ತಮ ಪ್ರದರ್ಶನ ನೀಡಿದರೆ ಗಿಲ್ ಮುಂದಿನ ಟಿ20 ನಾಯಕನಾಗುವ ಸಾಧ್ಯತೆ ಹೆಚ್ಚಿದೆ.



