ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮನ್ನು ಜೈಲಿಗೆ ಹಾಕಿದ್ರೂ, ನೇಣಿಗೆ ಹಾಕಿದ್ರೂ ವಂದೇ ಮಾತರಂನ ಎರಡು ಪ್ಯಾರಾ ಅಷ್ಟೇ ಹಾಡೋದು, ಪೂರ್ಣವಾಗಿ ಹಾಡೋದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಹಾಡಿನ ಬಗ್ಗೆ ನಮಗೆ ಯಾವುದೇ ವಿರೋಧ ಇಲ್ಲ. ಆದರೆ ವಂದೇ ಮಾತರಂ ಹಾಡಿನ ಎರಡು ಪ್ಯಾರಾ ಮಾತ್ರ ಹೇಳೋಕೆ ಆಗೋದು. ಪೂರ್ಣವಾಗಿ ಯಾವ ಕಾರ್ಯಕ್ರಮದಲ್ಲಿಯೂ ಹಾಡೋದಿಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರಗೀತೆಗೆ ಎರಡನೇ ಸ್ಥಾನ?
ಸೋನಿಯಾ ಗಾಂಧಿ ಅವರು ವಂದೇ ಮಾತರಂಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಹರಿಪ್ರಸಾದ್, ನೇಣು ಹಾಕಿದರೂ, ಜೈಲಿಗೆ ಹಾಕಿದರೂ ನಾವು ಹಾಡುವುದು ಎರಡು ಪ್ಯಾರಾ ಎಂದಿದ್ದಾರೆ. ವಂದೇ ಮಾತರಂನ್ನು ಕಡ್ಡಾಯ ಮಾಡಿ ರಾಷ್ಟ್ರಗೀತೆಗೆ ಎರಡನೇ ದರ್ಜೆಗೆ ತರುವ ಪ್ರಯತ್ನ ಮಾಡಲಾಗುತ್ತಿದೆ.ನಾವು ವಂದೇ ಮಾತರಂ ವಿರುದ್ಧ ಇಲ್ಲ. ಆದರೆ, ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಪೂರ್ಣ ಗೀತೆ ಹಾಡುವುದಿಲ್ಲ. ಎರಡು ಪ್ಯಾರಾಗಳನ್ನು ಮಾತ್ರ ಹಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಸರ್ಕಾರದ ಕಾರ್ಯಕ್ರಮಗಳಲ್ಲಿ ಪೂರ್ಣ ಗೀತೆ ಹಾಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಸರ್ಕಾರ ಜನರಿಂದ ಆಯ್ಕೆಯಾಗಿದೆ. ಕಾನೂನು ಪಾಲನೆ ಮಾಡಲಿ, ನಮ್ಮ ಆಕ್ಷೇಪವಿಲ್ಲ ಎಂದರು.



