ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುದ್ಧ ಅನಿವಾರ್ಯ ಎಂಬ ಸ್ಥಿತಿ ನಿರ್ಮಾಣವಾದರೆ ಪಾಕಿಸ್ತಾನದ ಜೊತೆ ಯುದ್ಧ ಮಾಡಲೇಬೇಕು, ಅದಕ್ಕೆ ನಮ್ಮ ಯಾವುದೇ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಾಗಲಕೋಟೆಯ ಕೂಡಲಸಂಗಮ ಸಭಾಭವನ ಬಳಿ ಮಾಧ್ಯಮ ಪ್ರತಿನಿಽಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ 1971ರಲ್ಲಿ ಯುದ್ಧ ನಡೆಸಿ ಇಂದಿರಾ ಗಾಂಧಿಯವರು ಪಾಕಿಸ್ತಾನವನ್ನು ಬಗ್ಗು ಬಡಿದಿದ್ದರು. ಅಂದು ಪಾಕಿಸ್ತಾನದ ಸುಮಾರು 80 ಸಾವಿರ ಸೈನಿಕರು ಶರಣಾಗತರಾಗಿದ್ದರು. ಒಟ್ಟಿನಲ್ಲಿ ಭಯೋತ್ಪಾದನೆಯ ಮೂಲೋಚ್ಚಾಟನೆಯಾಗಬೇಕು. ಎಲ್ಲರಿಗೂ ಕೇಂದ್ರ ಸರ್ಕಾರ ಭದ್ರತೆ ಒದಗಿಸಬೇಕು ಎಂದು ಅವರು ಹೇಳಿದರು.
ಉಗ್ರರ ದಾಳಿಯ ನಂತರ ಕೇಂದ್ರ ಸರ್ಕಾರದ ರಾಜತಾಂತ್ರಿಕ ನಡೆಯಿಂದಾಗಿ ತಾಯಿ ಮಕ್ಕಳು ಅಗಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮ ಬೆಂಬಲ ಇದೆ ಎಂದರು.