ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಮಗನಿಗೆ ಸಲಹೆ ನೀಡ್ತೇನೆ, ರಾಜಕೀಯದ ಸಹವಾಸ ಬೇಡ, ಸಿನಿಮಾ ರಂಗದಲ್ಲಿ ಮುಂದುವರಿ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸಲಹೆ ನೀಡಿದ್ದರು.
ಇದರಿಂದಾಗಿ ನಿಖಿಲ್ ಕುಮಾರಸ್ವಾಮಿ ರಾಜಕಾರಣದಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರಾ ಎನ್ನುವ ಪ್ರಶ್ನೆ ಎಲ್ಲರಿಗೂ ಎದುರಾಗಿತ್ತು. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ತಂದೆಯವರು ಹೇಳಿದ ಮಾತು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನಾನು ಸೋತಿದ್ದೇನೆ ನಿಜ, ಆದರೆ ಜನರ ಪ್ರೀತಿ ಕೊಂಚವೂ ಕಡಿಮೆಯಾಗಿಲ್ಲ. ರಾಜಕಾರಣದಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದೀನಿ ಅನ್ನೋ ಭಾವನೆ ಬೇಡ ಎಂದಿದ್ದಾರೆ.