ಶಾಲೆಯ ಹಾಸ್ಟೆಲ್‌ನಲ್ಲೂ ಹೆಣ್ಣುಮಕ್ಕಳು ಸೇಫ್‌ ಇಲ್ಲ, ಎಂಟು ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಧ್ಯಪ್ರದೇಶದ ಪ್ರಸಿದ್ಧ ಖಾಸಗಿ ಶಾಲೆಯೊಂದರ ಹಾಸ್ಟೆಲ್​ನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಕುರಿತು ಎಸ್​ಐಟಿ ರಚಿಸಲು ಮುಖ್ಯಮಂತ್ರಿ ಮೋಹನ್ ಯಾದವ್ ಆದೇಶಿಸಿದ್ದಾರೆ. ಮಧ್ಯಪ್ರದೇಶದ ಕಾಂಗ್ರೆಸ್​ ಅಧ್ಯಕ್ಷ ಜಿತು ಪಟ್ಟಾರಿ ಮಾತನಾಡಿ,ಮಧ್ಯಪ್ರದೇಶದಲ್ಲಿ ದೌರ್ಜನ್ಯ, ಅತ್ಯಾಚಾರ ಸೇರಿದಂತೆ ಗಂಭೀರ ಅಪರಾಧಗಳು ಹೆಚ್ಚಾಗಿವೆ.

ಈ ಸಂಬಂಧ ದೂರು ಸ್ವೀಕರಿಸಿದ ಬಳಿಕ ಪೊಲೀಸರು ಮಂಗಳವಾರ ರಾತ್ರಿ ಮೂವರ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಪರಾಧಕ್ಕೂ ಮುನ್ನ ಬಾಲಕಿಗೆ ಡ್ರಗ್ಸ್​ ನೀಡಲಾಗಿತ್ತೆ ಎಂಬುದನ್ನು ಅಧಿಕಾರಿಗಳ ಬಳಿ ಕೇಳಿದಾಗ ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಸ್ಪಷ್ಟವಾಗಲಿದೆ ಎಂದು ಹೇಳಿದ್ದಾರೆ. ಹಾಸ್ಟೆಲ್ ವಾರ್ಡನ್ ಸೇರಿದಂತೆ ಮೂವರು ಶಂಕಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!