ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರದ ಶಕ್ತಿ ಯೋಜನೆ ವಿರುದ್ಧ ಖಾಸಗಿ ಸಾರಿಗೆ ಸಂಗಟನೆಗಳು ಬೆಂಗಳೂರಿನಲ್ಲಿ ಬಂದ್‌ಗೆ ಕರೆ ಕೊಟ್ಟಿದ್ದು, ಈ ಬಂದ್ ಬೆಂಗಲೂರಿನಾಚೆಗೂ ಹಬ್ಬಿದೆ. ಉತ್ತರಕನ್ನಡ ಜಿಲ್ಲೆಯಲ್ಲೂ ಖಾಸಗಿ ವಾಹನಗಳು ತಮ್ಮ ಸಹಕಾರ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುತ್ತಿವೆ.
ಉತ್ತರ ಕನ್ನಡ ಜಿಲ್ಲೆಯ ವಿವಿಧ ಖಾಸಗಿ ಸಾರಿಗೆ ಸಂಘಟನೆಗಳು ತಮ್ಮ ಬೆಂಬಲ ಸೂಚಿಸಿವೆ. ಅದರಂತೆ ಕಾರವಾರದಲ್ಲೂ ಆಟೋ, ಟ್ಯಾಕ್ಸಿ, ಟೆಂಪೋ, ಖಾಸಗಿ ಬಸ್‌ಗಳು ರಸ್ತೆಗಿಳಿಯದೆ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವುದೇ ಮುನ್ಸೂಚನೆ ನೀಡದೆ ದಿಢೀರ್ ನಿರ್ಧಾರದಿಂದ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಬದಲಿ ವಾಹನಗಳ ಹುಡುಕಾಟದಲ್ಲಿ ಪ್ರಯಾಣಿಕರು ತೊಡಗಿದ್ದಾರೆ.