ಈಗಲೂ I.N.D.I.A. ಮೈತ್ರಿಕೂಟದ ಜೊತೆಗಿದ್ದೇವೆ: ಜೆಡಿಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್​ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳುವುದು ಸೂಕ್ತ. ಮುಂದಿನ ದಿನ ಪಕ್ಷವು ದೃಢವಾಗಿ ಇಂಡಿಯಾ ಬಣದ ಜೊತೆಗಿದೆ ಎಂದು ಜೆಡಿಯು ತಿಳಿಸಿದೆ.

ಈ ಕುರಿತು ಮಾತನಾಡಿರುವ ಜೆಡಿಯು ಅಧ್ಯಕ್ಷ ಉಮೇಶ್ ಸಿಂಗ್ ಕುಶ್ವಾಹ, ಜೆಡಿಯು ಪಕ್ಷವು ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಎ ಬಣಕ್ಕೆ ಮರಳಲು ಯತ್ನಿಸುತ್ತಿದೆ ಎಂಬ ವದಂತಿಗಳನ್ನು ಅಲ್ಲಗಳೆದಿದ್ದಾರೆ.

ಮಹಾಘಟಬಂಧನ್ ಸರ್ಕಾರದಲ್ಲಿ ಎಲ್ಲವೂ ಸರಿ ಇದೆ. ಕೆಲವು ಅಜೆಂಡಾಗಳನ್ನು ಇಟ್ಟುಕೊಂಡು ಮಾಧ್ಯಮಗಳಲ್ಲಿ ವದಂತಿ ಹಬ್ಬಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ನಾನು ನಿನ್ನೆ ಮತ್ತು ಇಂದು ಸಿಎಂ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದೆ. ಅಲ್ಲಿ ಪಕ್ಷ ಎನ್‌ಡಿಎ ಬಣಕ್ಕೆ ಸೇರುವ ಚರ್ಚೆ ನಡೆದಿಲ್ಲ. ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವದಂತಿಯಲ್ಲಿ ಯಾವುದೇ ಸತ್ಯವಿಲ್ಲ. ಪಕ್ಷದ ಶಾಸಕರನ್ನು ಪಾಟ್ನಾಗೆ ಬರಲು ಸೂಚಿಸಲಾಗಿದೆ ಎಂಬುದೂ ವದಂತಿ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!