ಬರೋಬ್ಬರಿ 35 ವರ್ಷಗಳ ಬಳಿಕ ರಾಷ್ಟ್ರಪತಿ ಸನ್ಮಾನಕ್ಕೆ ಪೂರ್ವ ಸಿದ್ಧತೆ: ಭರದಿಂದ ಸಾಗಿದ ಕಾರ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸುಮಾರು ಮೂರೂವರೆ ದಶಕಗಳ ಬಳಿಕ ರಾಷ್ಟ್ರಪತಿಯವರಿಗೆ ಪೌರಸನ್ಮಾನ ನೀಡುತಿದ್ದು, ಎರಡನೇ ಬಾರಿಗೆ ರಾಷ್ಟ್ರದ ಪ್ರಥಮ ಪ್ರಜೆಗೆ ಪೌರಸನ್ಮಾನ ಮಾಡುವ ಭಾಗ್ಯವನ್ನು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಪಡೆದುಕೊಂಡಿದೆ.
ಹುಬ್ಬಳ್ಳಿಯ ಮೇಯರ್ ಈರೇಶ ಅಂಚಟಗೇರಿ ಅವರು ಮಾತನಾಡಿದರು. ಈ ಬಗ್ಗೆ ಮೇಯರ್ ಈರೇಶ ಅಂಚಟಗೇರಿ ಮಾತನಾಡಿ, ಸೆ. 26ರಂದು ಆಗಮಿಸುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ಸಲ್ಲಿಸಲು ದೇಶಪಾಂಡೆ ನಗರದ ಕರ್ನಾಟಕ ಜಿಮಖಾನಾ ಕ್ಲಬ್‌ ಶೃಂಗಾರಗೊಳ್ಳುತ್ತಿದೆ. ರಾಜ್ಯ – ದೇಶ, ವಿದೇಶಗಳ ಅತ್ಯುನ್ನತ ಸ್ಥಾನದಲ್ಲಿದ್ದವರು, ಮೇರು ಕಲಾವಿದರು, ಯೋಧರು, ಸಾಧಕರಿಗೆ ಮಹಾನಗರ ಪಾಲಿಕೆ ಪೌರಸನ್ಮಾನ ಕೈಗೊಳ್ಳುತ್ತದೆ.

ರಾಷ್ಟ್ರಪತಿಗೆ ಸನ್ಮಾನ

ಮಹಾನಗರದ ಜನತೆಯ ಪರವಾಗಿ ಈ ಸನ್ಮಾನ ಸಲ್ಲಿಕೆಯಾಗುತ್ತದೆ. ಪಾಲಿಕೆ ಅಸ್ತಿತ್ವಕ್ಕೆ ಬಂದು 60 ವರ್ಷಗಳಾಗಿದ್ದು, ಹಲವು ಗಣ್ಯರು, ಕಲಾವಿದರು, ಸಾಧಕರಿಗೆ ಪೌರಸನ್ಮಾನ ಸಲ್ಲಿಸುತ್ತ ಬಂದಿದೆ. ಇದೀಗ ದೇಶದ ಎರಡನೇ ಮಹಿಳಾ ಮತ್ತು ಬುಡಕಟ್ಟು ಸಮುದಾಯದಿಂದ ಮೊದಲ ರಾಷ್ಟ್ರಪತಿ ಆಗಿರುವ ದ್ರೌಪದಿ ಮುರ್ಮು ಅವರಿಗೆ ಪೌರಸನ್ಮಾನ ಕೈಗೊಳ್ಳಲಾಗುತ್ತಿದೆ.

1986-87ರಲ್ಲಿ ಗ್ಯಾನಿ ಜೈಲ್‌ಸಿಂಗ್‌ ಅವರು ಹುಬ್ಬಳ್ಳಿಗೆ ಆಗಮಿಸಿದಾಗ ಪಾಲಿಕೆಯಿಂದ ಪೌರಸನ್ಮಾನ ನೀಡಲಾಗಿತ್ತು. ಇದೀಗ ಸುಮಾರು 35 ವರ್ಷಗಳ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರಸನ್ಮಾನ ಕೈಗೊಳ್ಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!