ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನ ಮೈಸೂರಿನಲ್ಲಿ ಬಂಧಿಸಲಾಗಿದ್ದು, ಕೊಲೆಯಾದ ವ್ಯಕ್ತಿ ಕೂಡ ದರ್ಶನ್ ಫ್ಯಾನ್ ಎನ್ನುವ ವಿಷಯ ತಿಳಿದುಬಂದಿದೆ.
ಚಿತ್ರದುರ್ಗ ಮೂಲದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯ ನಿವಾಸಿ ರೇಣುಕಾಸ್ವಾಮಿ ಮನೆಯಿಂದ ಹೊರಟವರು ವಾಪಸ್ ಬಂದಿಲ್ಲ. ಈ ಬಗ್ಗೆ ಕುಟುಂಬದವರಿಗೆ ಆತಂಕ ಎದುರಾಗಿತ್ತು. ಆ ಬಳಿಕ ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವುದಾಗಿ ಕುಟುಂಬದವರಿಗೆ ಪೊಲೀಸರ ಮಾಹಿತಿ ನೀಡಿದರು.
ಜೂನ್ 9 ರಂದು ಸುಮನಹಳ್ಳಿಯ ಸತ್ವ ಅನುಗ್ರಹ ಅಪಾರ್ಟ್ಮೆಂಟ್ ಸಮೀಪದ ಮೋರಿಯಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿದೆ. ಅನುಗ್ರಹದ ಸೆಕ್ಯೂರಿಟಿ ಆಫೀಸರ್ ಕೇವಲ್ ರಾಮ್ ದೋರ್ ಜೀ ದೂರು ನೀಡಿದರು. ಇದೀಗ ಪೊಲೀಸರು ದರ್ಶನ್ರನ್ನು ಅರೆಸ್ಟ್ ಮಾಡಿ, ಪವಿತ್ರಾ ಗೌಡರನ್ನು ವಶಕ್ಕೆ ಪಡೆದಿದ್ದಾರೆ. ದರ್ಶನ್ ಹಾಗೂ ವಿಜಯಲಕ್ಷ್ಮಿ ಮಧ್ಯೆ ಪವಿತ್ರಾ ಬಂದಿದ್ದೇ ಆತನ ಅಶ್ಲೀಲ ಕಮೆಂಟ್ಗೆ ಕಾರಣ ಎನ್ನಲಾಗಿದೆ.