ರಾಮಮಂದಿರದ ಅರ್ಚಕರಿಗೂ ಡ್ರೆಸ್‌ಕೋಡ್‌, ಆಂಡ್ರಾಯ್ಡ್‌ ಮೊಬೈಲ್‌ ತರುವಂತಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಯೋಧ್ಯೆಯಲ್ಲಿ ರಾಮನ ದರುಶನಕ್ಕಾಗಿ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಇದೀಗ  ರಾಮಮಂದಿರ ಟ್ರಸ್ಟ್ ರಾಮನ ಗರ್ಭಗುಡಿಯಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇನ್ನು ರಾಮಮಂದಿರದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿದೆ.

ಈ ಡ್ರೆಸ್​ ಕೋಡ್ ಅರ್ಚಕರಿಗೆ ಅನ್ವಯವಾಗಲಿದೆ, ದೇವಸ್ಥಾನದ ಅರ್ಚಕರು ಇನ್ನುಮುಂದೆ ಒಂದೇ ಬಗೆಯ ಉಡುಪಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಚಕರು ಚೌಬಂದಿ ಪೇಟ ಹಾಗೂ ಹಳದಿ ಬಣ್ಣದ ಧೋತಿ, ಕುರ್ತಾವನ್ನು ಧರಿಸಲಿದ್ದಾರೆ. ರಾಮಲಲ್ಲಾ ಆವರಣದಲ್ಲಿ ಕೆಲಸ ಮಾಡುವವರಿಗೆ ಶೀಘ್ರ ಡ್ರೆಸ್​ ಕೋಡ್ ಶೀಘ್ರ ಜಾರಿಯಾಗಲಿದೆ. ಅಯೋಧ್ಯೆಯ ರಾಮಮಂದಿರದ ಆವರಣದಲ್ಲಿ ಮೊಬೈಲ್​ ಫೋನ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.

ಅರ್ಚಕರು ತಮ್ಮ ಆ್ಯಂಡ್ರಾಯ್ಡ್​ ಮೊಬೈಲ್​ನೊಂದಿಗೆ ದೇವಸ್ಥಾನಕ್ಕೆ ಬರುವುದನ್ನು ಟ್ರಸ್ಟ್​ ನಿಷೇಧಿಸಿದೆ. ಅಗತ್ಯವಿದ್ದರೆ ಸಂವಹನಕ್ಕಾಗಿ ಕೀಪ್ಯಾಡ್​ ಫೋನ್​ಗಳನ್ನು ಮಾತ್ರ ಬಳಸಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!