ಜಾತಿ ಜನಗಣತಿ ಬೇಡ ಎನ್ನುವವರಿಗೂ ವರದಿಯಲ್ಲೇನಿದೆ ಎಂಬುದೇ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ವರದಿ ಬಾಗಲಕೋಟೆ:

ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯ ನವನಗರದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ಅವರಿಗೆ ವರದಿಯಲ್ಲಿ ಏನಿದೆ ಎಂಬುದೇ ಗೊತ್ತಿಲ್ಲ. ಯಾರೇ ಆಗಲಿ ಗೊತ್ತಿಲ್ಲದೆ ಮಾತನಾಡಬಾರದು. ಸಮಾಜ ಏಕೆ ಒಡೆಯುತ್ತೇವೆ? ಎಂದು ಪ್ರಶ್ನಿಸಿದರು. ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹಿಸಿ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಮೂಲ ವರದಿ ಕಳೆದಿದೆ ಎಂದು ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಯಪ್ರಕಾಶ್ ಹೇಳಿಕೆ ಬಗ್ಗೆ ಮಾತನಾಡಿ, ಅವರನ್ನು ಕರೆದು ಈ ಕುರಿತು ಮಾತನಾಡುತ್ತೇನೆ ಎಂದು ಹೇಳಿದರು.

ನಿತೀಶ್ ಕುಮಾರ್ ಬಿಹಾರದಲ್ಲಿ ಜಾತಿಗಣತಿ ಸ್ವೀಕರಿಸಿದ್ದಾರೆ. ಸಮಾಜ ಒಡೆದುಬಿಟ್ಟರೆ ಎಂದು ಹೇಳಿದರೆ,
ಯಾವುದೇ ಹೇಳಿಕೆ ನೀಡುವಾಗ ಅದು ಸತ್ಯಾಂಶದ ಮೇಲೆ ಅವಲಂಬಿತವಾಗಿರಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!