ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದೂವರೆ ತಿಂಗಳ ಬೇಸಿಗೆ ರಜೆ ಬಳಿಕ ಇತ್ತೀಚೆಗೆ ರಾಜ್ಯದ ಎಲ್ಲೆಡೆ ಶಾಲೆಗಳು ಪುನಾರಂಭವಾಗಿವೆ. ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಇನ್ನೂ ಪಠ್ಯಪುಸ್ತಕ ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಚಿತ ಅಂತ ಹೇಳಿ ಇದುವರೆಗೂ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ, ಉಚಿತ ಅನ್ನೋದು ತುಂಬಾ ದಿನ ಉಳಿಯೋದಿಲ್ಲ. ಮೊದಲು ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸರ್ಕಾರ ಗಮನ ಕೊಡಲಿ, ಇನ್ನೂ ಉಚಿತ 10 ಯೋಜನೆ ಕೊಡಿ, ನಮ್ಮ ವಿರೋಧ ಇಲ್ಲ. ಆದರೆ ಆರ್ಥಿಕ ಪರಿಸ್ಥಿತಿ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ. ಸರ್ಕಾರ ಪಾಪರ್ ಆಗಿದ್ಯಾ, ಹಣದ ಹೊಳೆ ಹರಿಯುತ್ತಿದ್ಯಾ ಗೊತ್ತಾಗಲಿ ಎಂದಿದ್ದಾರೆ.