March 10, 2026
Tuesday, March 10, 2026
spot_img

ವೇದಿಕೆಯಲ್ಲಿ ಅಕ್ಕಪಕ್ಕವಿದ್ದರೂ ಮಾತಿಲ್ಲ, ಕತೆಯಿಲ್ಲ: ಸಿದ್ದು-ಡಿಕೆಶಿ ನಡುವೆ ಹೆಚ್ಚಾಯ್ತಾ ಮುನಿಸು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ದಿನಗಳಿಂದ ಸದ್ದಿಲ್ಲದೆ ನಡೆಯುತ್ತಿದ್ದ ‘ಮುಖ್ಯಮಂತ್ರಿ ಕುರ್ಚಿ’ ಚರ್ಚೆ ಈಗ ನಿರ್ಣಾಯಕ ಹಂತಕ್ಕೆ ತಲುಪುವ ಲಕ್ಷಣಗಳು ಕಾಣುತ್ತಿವೆ.

ಈ ತಿಂಗಳ ಅಂತ್ಯದೊಳಗೆ ಹೈಕಮಾಂಡ್ ಒಂದು ಅಂತಿಮ ತೀರ್ಮಾನಕ್ಕೆ ಬರುವ ಸಾಧ್ಯತೆಯಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿಯಿಂದ ಬುಲಾವ್ ಬರುವ ಸಾಧ್ಯತೆ ದಟ್ಟವಾಗಿದೆ.

ಒಂದೆಡೆ ಹೈಕಮಾಂಡ್ ಸಂಧಾನದ ಪ್ರಯತ್ನ ಮಾಡುತ್ತಿದ್ದರೆ, ಇತ್ತ ಸಿಎಂ ಮತ್ತು ಡಿಸಿಎಂ ನಡುವಿನ ಅಂತರ ಹೆಚ್ಚಾಗುತ್ತಿರುವ ಸೂಚನೆಗಳು ಸಿಗುತ್ತಿವೆ. ಇತ್ತೀಚೆಗೆ ನಡೆದ ‘ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ-2026’ ಕಾರ್ಯಕ್ರಮವೇ ಇದಕ್ಕೆ ಸಾಕ್ಷಿಯಾದಂತಿದೆ. ಕಾರ್ಯಕ್ರಮದ ಉದ್ದಕ್ಕೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಪಕ್ಕಪಕ್ಕದಲ್ಲೇ ಕುಳಿತಿದ್ದರೂ, ಪರಸ್ಪರ ಮಾತನಾಡದೆ ಮೌನಕ್ಕೆ ಶರಣಾಗಿದ್ದರು. ಇಬ್ಬರ ನಡುವಿನ ಈ ಬಿಗುಮಾನ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !