ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ರಿಗೆ ಅಭಿನಂದನಾ ಪತ್ರವೊಂದನ್ನು ಪ್ರಧಾನಿ ನರೇಂದ್ರ ಮೋದಿ ಬರೆದಿದ್ದಾರೆ. ಈ ಪತ್ರವನ್ನು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನೀವು ಸಾವಿರಾರು ಮೈಲಿಗಳಷ್ಟು ದೂರದಲ್ಲಿದ್ದರೂ, ನಮ್ಮ ಹೃದಯಗಳಿಗೆ ಹತ್ತಿರವಾಗಿದ್ದೀರಿ. ಭಾರತದ ಜನರು ನಿಮ್ಮ ಉತ್ತಮ ಆರೋಗ್ಯ ಮತ್ತು ಕಾರ್ಯಾಚರಣೆಯ ಯಶಸ್ಸಿಗೆ ಪ್ರಾರ್ಥಿಸುತ್ತಿದ್ದಾರೆ” ಎಂದು ನರೇಂದ್ರ ಮೋದಿ ಪತ್ರದಲ್ಲಿ ಬರೆದಿದ್ದಾರೆ.
ತಮ್ಮ ಪತ್ರದಲ್ಲಿ, ಮೋದಿ ಸುನೀತಾ ವಿಲಿಯಮ್ಸ್ ಮಾಡಿರುವ ಸಾಧನೆಗಳ ಬಗ್ಗೆ ಅಪಾರ ಹೆಮ್ಮೆ ವ್ಯಕ್ತಪಡಿಸಿದ್ದಾರೆ ಮತ್ತು 1.4 ಬಿಲಿಯನ್ ಭಾರತೀಯರು ವಿಲಿಯಮ್ಸ್ ರ ಪರಿಶ್ರಮ ಮತ್ತು ಬಾಹ್ಯಾಕಾಶ ಪರಿಶೋಧನೆಗೆ ನೀಡಿದ ಕೊಡುಗೆಗಳು ಸ್ಮರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
As the whole world waits, with abated breath, for the safe return of Sunita Williams, this is how PM Sh @narendramodi expressed his concern for this daughter of India.
“Even though you are thousands of miles away, you remain close to our hearts,” says PM Sh Narendra Modi’s… pic.twitter.com/MpsEyxAOU9— Dr Jitendra Singh (@DrJitendraSingh) March 18, 2025