ಕೊಡಗು: ಜ.20ರಂದು ‘ಪ್ರೊ.ಚಂಪಾ ಒಂದು ನೆನಪುʼ ಕಾರ್ಯಕ್ರಮ

ಹೊಸದಿಗಂತ ವರದಿ, ಕೊಡಗು:
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಂಯುಕ್ತ ಆಶ್ರಯದಲ್ಲಿ ‘ಚಂಪಾ’ ಒಂದು ನೆನಪು ಉಪನ್ಯಾಸ ಹಾಗೂ ಸಾಹಿತಿ ಬಿ.ಆರ್.ಜೋಯಪ್ಪ ಅವರ ಕೃತಿ ‘ಬದುಕು’ ಪರಿಸರ ಕಥನ ಬಿಡುಗಡೆ ಕಾರ್ಯಕ್ರಮ ಜ.20ರಂದು ನಡೆಯಲಿದೆ.
ಅಂದು ಮಧ್ಯಾಹ್ನ 2.30ಕ್ಕೆ ಮಡಿಕೇರಿಯ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕಸಾಪ ಹಾಗೂ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ತ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ‌ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಉದ್ಘಾಟಿಸಲಿದ್ದಾರೆ.
ಗದಗದ ಕೆ.ವಿ.ಎಸ್.ಆರ್. ಕಾಲೇಜಿನ ಪ್ರಾಚಾರ್ಯ ಸಾಹಿತಿ ಮತ್ತು ಚಿಂತಕ ಪ್ರೊ. ಸಿದ್ದು ಯಾಪಲಪರವಿ ಅವರು ಪ್ರೊ. ಚಂಪಾ ಕುರಿತು ಉಪನ್ಯಾಸ ನೀಡಲಿದ್ದಾರೆ.
ಸಾಹಿತಿ ಬಿ.ಆರ್.ಜೋಯಪ್ಪ ಅವರು ರಚಿಸಿದ ‘ಬದುಕು’ ಪರಿಸರ ಕಥನ ಪುಸ್ತಕವನ್ನು ಮಡಿಕೇರಿಯ ಫೀ.ಮಾ.ಕಾರ್ಯಪ್ಪ ಕಾಲೇಜಿನ ಹಿಂದಿ ಭಾಷಾ ವಿಭಾಗದ ಪ್ರಾಧ್ಯಾಪಕ ಡಾ. ಶ್ರೀಧರ ಹೆಗಡೆ ಬಿಡುಗಡೆಗೊಳಿಸಿ ಮಾತನಾಡಲಿದ್ದಾರೆ. ಸಾಹಿತಿ ಬಿ.ಆರ್. ಜೋಯಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಕೊಡಗಿನ ಯುವ ಗಾಯಕರಿಂದ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು‌ ಕಸಾಪ ಗೌರವ ಕಾರ್ಯದರ್ಶಿ ಎಸ್.ಐ. ಮುನಿರ್ ಅಹಮದ್ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!