Wednesday, November 5, 2025

ಪ್ರತಿಯೊಬ್ಬ ಮುಸಲ್ಮಾನನೂ ಶಿಕ್ಷಣವಂತನಾಗಬೇಕು: ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಪ್ರತಿಯೊಬ್ಬ ಮುಸಲ್ಮಾನನೂ ಶಿಕ್ಷಣವಂತನಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.

ದಾರುಲ್ ಕುರಾನ್ ಕ್ಯಾಂಪಸ್ ಅನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಯಾವುದೇ ಜಾತಿ ಧರ್ಮಕ್ಕೆ ಸೇರಿದ್ದರೂ, ಪ್ರತಿಯೊಬ್ಬರಿಗೂ ವಿದ್ಯೆ ಮುಖ್ಯ. ಸ್ವಾಭಿಮಾನಿ ಬದುಕಿಗೆ ಶಿಕ್ಷಣ ಅತ್ಯಂತ ಮುಖ್ಯ. ಸಾಮಾಜಿಕ ಸಂಕೋಲೆಗಳಿಂದ ಮುಕ್ತರಾಗಲು ಶಿಕ್ಷಣ ಅಗತ್ಯವೆಂದು ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದ್ದಾರೆ. ಪ್ರತಿಯೊಬ್ಬ ಮುಸಲ್ಮಾನನೂ ಶಿಕ್ಷಣವಂತನಾಗಬೇಕು ಎಂದರು.

ಸಂವಿಧಾನ ಅಸ್ತಿತ್ವಕ್ಕೆ ಬಂದ ನಂತರವಷ್ಟೇ ಎಲ್ಲರಿಗೂ ಶಿಕ್ಷಣ ಪಡೆಯುವ ಸಮಾನ ಅವಕಾಶ ಸಾಧ್ಯವಾಯಿತು. ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದ್ದು, ಇದಕ್ಕಾಗಿ ಅನುದಾನವನ್ನೂ ನೀಡಲಾಗುವುದು. ಅಲ್ಲದೇ ವಸತಿ ಶಾಲೆಗಳನ್ನು ಸ್ಥಾಪಿಸಿ ಮುಸಲ್ಮಾನ ಬಂಧುಗಳಿಗೆ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಿಕ್ಷಣಕ್ಕೂ ಅನುಕೂಲ ಮಾಡಿಕೊಡಲಾಗುವುದು ಎಂದು ಹೇಳಿದರು.

error: Content is protected !!