ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷ ಹೆಜ್ಜೆ ಹೆಜ್ಜೆಗೂ ಅಂಬೇಡ್ಕರ್ ಅವರನ್ನು ಅವಮಾನಿಸುತ್ತಲೇ ಬಂದಿದೆ. ದಲಿತರ ವೋಟ್ ಬ್ಯಾಂಕ್‌ಗಾಗಿ ಮೊಸಳೆ ಕಣ್ಣೀರಿಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.
“ಭೀಮ ಹೆಜ್ಜೆ” ಶತಮಾನ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಅಂದು ಅಂಬೇಡ್ಕರ್ ಗೆದ್ದಂತಹ ಜೈಸೂರು, ಕುಲ್ಲಾ, ಹರೀದ್ಪುರ ಪ್ರದೇಶಗಳನ್ನು ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಪಕ್ಷ ಅವಮಾನಗಳನ್ನೇ ಮಾಡುತ್ತಾ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.