‘ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚ್ತಾರೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡೋ ಕುತಂತ್ರ ಈಗ ಗುಟ್ಟಾಗಿ ಏನು ಉಳಿದಿಲ್ಲ ಎಂದು ಆರ್.ಅಶೋಕ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅಶೋಕ್, ಇತೀಚೆಗೆ ನಡೆದ ಎಐಸಿಸಿ ಅಧಿವೇಶನದ ಸಂದರ್ಭದಲ್ಲಿ, ದೆಹಲಿ ಪ್ರವಾಸದ ವೇಳೆ ಸಿಎಂ ಸಿದ್ದರಾಮಯ್ಯನವರಿಗೆ ಭಾರಿ ಹಿನ್ನೆಡೆ ಆಗಿದೆ. ಹನಿಟ್ರಾಪ್ ಸೇರಿದಂತೆ ಸರ್ಕಾರದ ಸಾಲು ಸಾಲು ವೈಫಲ್ಯಗಳ ಬಗ್ಗೆ, ಎಡವಟ್ಟುಗಳು ವಿಚಾರವಾಗಿ ಹೈಕಮಾಂಡ್ ಸಿದ್ದರಾಮಯ್ಯನವರ ಬಣದ ಕಿವಿ ಹಿಂಡಿದೆ. ಆದ್ದರಿಂದಲೇ ಈಗ ಸಿದ್ದರಾಮಯ್ಯನವರು ಧಿಡೀರನೆ ಜಾತಿ ಜನಗಣತಿ ಜಪ ಮಾಡುತ್ತಿದ್ದಾರೆ ಎನ್ನುವ ಗುಸುಗುಸು ಕಾಂಗ್ರೆಸ್ ವಲಯದಲ್ಲೇ ಕೇಳಿಬರುತ್ತಿದೆ ಎಂದಿದ್ದಾರೆ.

ನಾನು ಈಗಾಗಲೇ ಹಲವಾರು ಬಾರಿ ಹೇಳಿರುವಂತೆ ನಮ್ಮ ಸಮಾಜದಲ್ಲಿರುವ ತಳಸಮುದಾಯಗಳ ಅಭ್ಯುದಯಕ್ಕೆ ಯಾವುದೇ ಸಕಾರಾತ್ಮಕ ಹೆಜ್ಜೆ ಇಟ್ಟರೂ ಅದಕ್ಕೆ ನಮ್ಮ ಪಕ್ಷದ ಬೆಂಬಲವಿದೆ. ಆದರೆ ರಾಜಕೀಯ ಹಾವು ಏಣಿ ಆಟದಲ್ಲಿ ಕೆಳಗೆ ಬಿದ್ದಾಗಲೆಲ್ಲ, ಅಧಿಕಾರದ ಚದುರಂಗದಾಟದಲ್ಲಿ ಮುಗ್ಗರಿಸಿದಾಗಲೆಲ್ಲ ಮೇಲೇಳುವುದಕ್ಕೆ ತಳಸಮುದಾಯಗಳನ್ನ ದಾಳವಾಗಿ ಬಳಸುವುದಕ್ಕೆ ನಮ್ಮ ವಿರೋಧವಿದೆ ಎಂದಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!