ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಜೋರಾಂ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತದಾನ ಮಾಡುವಂತೆ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ.
ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಗೃಹ ಸಚಿವ, “ಮಿಜೋರಾಂನಲ್ಲಿರುವ ನಮ್ಮ ಸಹೋದರಿಯರು ಮತ್ತು ಸಹೋದರರು, ವಿಶೇಷವಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ಒತ್ತಾಯಿಸುತ್ತೇನೆ. ಪ್ರತಿಯೊಂದು ಮತವು ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ಮಿಜೋರಾಂಗೆ ಅಡಿಪಾಯವನ್ನು ಹಾಕುತ್ತದೆ” ಎಂದು ಬರೆದಿದ್ದಾರೆ.
ಮಿಜೋರಾಂ ವಿಧಾನಸಭಾ ಚುನಾವಣೆಗೆ ಮಂಗಳವಾರ ಮತದಾನ ಆರಂಭವಾಗಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮತದಾನ ನಡೆಯಲಿದೆ. ಒಟ್ಟು 174 ಅಭ್ಯರ್ಥಿಗಳು ಕಣದಲ್ಲಿದ್ದಾರೆ.