ಪ್ರತಿ ಹೆಣ್ಣು ತನ್ನ ಘನತೆಗೆ ಅರ್ಹಳು: ಕಾಂಗ್ರೆಸ್ ನಾಯಕಿಯ ಪೋಸ್ಟ್‌ಗೆ ನಟಿ ಕಂಗನಾ ತಿರುಗೇಟು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಾಲಿವುಡ್ ನಟಿ ಕಂಗನಾ ರಣಾವತ್‌ ಸ್ಪರ್ಧಿಸುತ್ತಿದ್ದು, ಇತ್ತ ಕಂಗನಾ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಪರ ವಿರೋಧಗಳು ವ್ಯಕ್ತವಾಗಿದೆ.

ಇದರ ನಡುವೆ ಕಾಂಗ್ರೆಸ್ ಪ್ರಮುಖ ನಾಯಕಿ ಸುಪ್ರಿಯಾ ಶ್ರೀನಾಥೆ ಮಾಡಿದ ಪೋಸ್ಟ್ ಭಾರಿ ವಿವಾದಕ್ಕೆ ಕಾರಣವಾಗಿದೆ. ಕಂಗನಾ ಹಾಟ್ ಫೋಟೋ ಒಂದನ್ನು ತನ್ನ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡ ನಾಯಕಿ, ವಿವಾದಾತ್ಮ ವಿಷಯವನ್ನು ಹಂಚಿಕೊಂಡಿದ್ದಾರೆ.

ಈ ಪೋಸ್ಟ್ ವಿರುದ್ಧ ಭಾರಿ ಆಕ್ರೋಶಗಳು ವ್ಯಕ್ತವಾಗಿದೆ. ಹೆಣ್ಣಿಗೆ ಕಾಂಗ್ರೆಸ್ ನೀಡುತ್ತಿರುವ ಗೌರವ ಇದು ಎಂದು ಅಸಮಾಧಾನಗಳು ವ್ಯಕ್ತವಾಗಿತ್ತು. ಈ ವಿವಾದ ಹೆಚ್ಚಾಗುತ್ತಿದ್ದಂತೆ ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ ತಿರುಗೇಟು ನೀಡಿದ್ದಾರೆ. ಪ್ರತಿ ಹೆಣ್ಣು ತನ್ನ ಘನತೆಗೆ ಅರ್ಹಳು ಎಂದು ತಿರುಗೇಟು ನೀಡಿದ್ದಾರೆ.

ಕಂಗನಾ ತಿರುಗೇಟು ಬೆನ್ನಲ್ಲೇ ಸುಪ್ರಿಯಾ ಶ್ರೀನಾಥೆ ತನ್ನ ಸಾಮಾಜಿಕ ಮಾಧ್ಯಮ ಖಾತೆ ಹ್ಯಾಕ್ ಮಾಡಲಾಗಿದೆ. ಈ ಪೋಸ್ಟ್ ಯಾರು ಹಾಕಿದ್ದಾರೆ ಎಂದು ತಿಳಿದಿಲ್ಲ. ಡಿಲೀಟ್ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಈ ಪೋಸ್ಟ್ ಲೋಕಸಭಾ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆ ತಂದಿದೆ.

ಸುಪ್ರೀಂ ಶ್ರೀನಾಥೆ ಪೋಸ್ಟ್‌ಗೆ ತಿರುಗೇಟು ನೀಡಿದ ಕಂಗನಾ, ಪ್ರೀತಿಯ ಸುಪ್ರಿಯಾಜೀ, ಒರ್ವ ಕಲಾವಿದೆಯಾಗಿ ಕಳೆದ 20 ವರ್ಷಗಳ ನನ್ನ ವೃತ್ತಿಬದುಕಿನಲ್ಲಿ ಎಲ್ಲಾ ರೀತಿಯ ಮಹಿಳಾ ಪಾತ್ರಗಳನ್ನು ನಿಭಾಯಿಸಿದ್ದೇನೆ. ಕ್ವೀನ್ ಚಿತ್ರದಲ್ಲಿ ನಿಷ್ಕಲ್ಮಷ ಪಾತ್ರದಲ್ಲಿ ಕಾಣಿಸಿಕೊಂಡರೆ, ಧಕ್ಕಡ್ ಚಿತ್ರದಲ್ಲಿ ಮೋಹಕ ಗೂಢಚರ್ಯೆಯಾಗಿ ಕಾಣಿಸಿಕೊಂಡಿದ್ದೇನೆ. ಮಣಿಕರ್ಣಿಕಾ ಚಿತ್ರದಲ್ಲಿ ದೇವತೆಯಾಗಿ, ಚಂದ್ರಮುಖಿಯಲ್ಲಿ ರಾಕ್ಷಿಸಿಯಾಗಿ, ರಜ್ಜೋದಲ್ಲಿ ವೇಶ್ಯೆಯ ಪಾತ್ರದಲ್ಲಿ ತಲೈವಿಯಲ್ಲಿ ಕ್ರಾಂತಿಕಾರಿ ನಾಯಕಿಯಾಗಿ ಪಾತ್ರ ನಿರ್ವಹಿಸಿದ್ದೇನೆ. ನಮ್ಮ ಹೆಣ್ಣು ಮಕ್ಕಳನ್ನು ಪೂರ್ವಗ್ರಹಗಳ ಸಂಕೋಲೆಯಿಂದ ಮುಕ್ತಗೊಳಿಸಬೇಕು. ಅವರ ದೇಹದ ಭಾಗಗಳ ಬಗ್ಗೆ ಕುತೂಹಲ ಹೆಚ್ಚಿಸುವುದಕ್ಕಿಂತ ಅವರನ್ನು ಹೆಣ್ಣಾಗಿ ಸಶಕ್ತಳಾಗಿ ಬೆಳೆಸಬೇಕು. ಲೈಂಗಿಕ ಕಾರ್ಯಕರ್ತೆಯರನ್ನು ಕೆಲವು ರೀತಿಯಲ್ಲಿ ನಿಂದಿಸುವದನ್ನು ತಡೆಯಬೇಕು. ಪ್ರತಿ ಹೆಣ್ಣು ಕೂಡ ತನ್ನ ಘನತೆಗೆ ಅರ್ಹಳು ಎಂದು ತಿರುಗೇಟು ನೀಡಿದ್ದಾರೆ.

ಕಂಗನಾ ತಿರುಗೇಟು ನೀಡಿದ ಬೆನ್ನಲ್ಲೇ ಸುಪ್ರಿಯಾ ಶ್ರೀನಾಥ್ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ‘ಯಾರೋ ಒಬ್ಬರು ನನ್ನ ಮೆಟಾ ಖಾತೆಗಳಾದ ಫೇಸ್‌ಬುಕ್ ಹಾಗೂ ಇನ್‌ಸ್ಟ್ರಾಂನಲ್ಲಿ ಈ ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಈ ಪೋಸ್ಟನ್ನು ಡಿಲೀಟ್ ಮಾಡಲಾಗಿದೆ. ನಾನು ಯಾವತ್ತೂ ಮಹಿಳೆ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿಲ್ಲ. ಇದು ನನ್ನನ್ನು ಗೊತ್ತಿರುವವರಿಗೆ ತಿಳಿದಿದೆ. ನನ್ನ ಹೆಸರಿನಲ್ಲಿರುವ ಕೆಲ ಪ್ಯಾರಡಿ ಖಾತೆಗಳು ನನ್ನ ಹೆಸರನ್ನು ದುರ್ಬಳಕೆ ಮಾಡುತ್ತಿದೆ.ವಿವಾದಾತ್ಮಕ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಈ ಕುರಿತು ಟ್ವಿಟರ್‌ಗೆ ದೂರು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!