ಹಿಜಾಬ್ ವಿಚಾರದಲ್ಲಿ ಕೋರ್ಟ್ ಕೊಡುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು: ಯದುವೀರ್

ಹೊಸದಿಗಂತ ವರದಿ, ಮೈಸೂರು:

ಮೈಸೂರು: ಹಿಜಾಬ್ ವಿಚಾರದಲ್ಲಿ ಕೋರ್ಟ್ ಕೊಡುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು ಎಂದು ಮೈಸೂರಿನ ರಾಜವಂಶಸ್ಥ ಯದುವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಶನಿವಾರ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ಪ್ರಕರಣ ರಾಜ್ಯ ಹೈಕೋರ್ಟ್ನಲ್ಲಿದೆ. ಕೋರ್ಟ್ ಕೊಡುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು. ಸಂವಿಧಾನವನ್ನು ಎಲ್ಲರೂ ಅನುಸರಿಸಬೇಕು. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಇಲ್ಲ ಎಂದರು. ಧರ್ಮ ರಕ್ಷಣೆಗೆ ಎಲ್ಲರೂ ಮುಂದಾಗಬೇಕು. ಸಮಾಜದ ಸ್ವಾಸ್ಥ ಹಾಳಾಗಬಾರದು. ನಾಗರಿಕ ಸಮಾಜದಲ್ಲಿ ಸೌಹಾರ್ದತೆಯಿಂದ ಎಲ್ಲರೂ ಬದುಕುವಂತಾಗಬೇಕು ಎಂದು ಹೇಳಿದರು. ಹಿಂದೂಗಳು ಧರ್ಮ ರಕ್ಷಣೆಗೆ ಎಲ್ಲರೂ ಒಂದಾಗಬೇಕು, ಒಗ್ಗಟ್ಟಾಗಿ ನಿಲ್ಲಬೇಕು ಎಂದು ಚಾಮರಾಜನಗರದಲ್ಲಿ ನೀಡಿದ ಹೇಳಿಕೆಗೆ ವಿಶೇಷ ಅರ್ಥ ಕಲ್ಪಿಸೋ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಟಿಪ್ಪು ಎಕ್ಸ್ಪ್ರೆಸ್‌ಗೆ ರೈಲಿಗೆ ಒಡೆಯರ್ ಎಕ್ಸ್ ಪ್ರೆಸ್ ಟ್ರೆನ್ ಎಂದು ಹೆಸರಿಡುವ ಬಗ್ಗೆ ಪ್ರತಿಕ್ರಿಯಿಸಿ, ರೈಲ್ವೆ ಕ್ಷೇತ್ರಕ್ಕೆ ಚಾಮರಾಜ ಒಡೆಯರ್ ಅವರು ಅಪಾರ ಕೊಡುಗೆ ನೀಡಿದ್ದಾರೆ. ಈ ವಿಚಾರದಲ್ಲಿ ವಿವಾದ ಉಂಟಾಗಬಾರದು. ಸರ್ಕಾರ ಜನಪರ ತೀರ್ಮಾನ ತೆಗೆದುಕೊಳ್ಳಬೇಕು, ಒಡೆಯರ್ ಹೆಸರನ್ನು ಇಟ್ಟರೆ ಸಂತಸವಾಗುತ್ತದೆ ಎಂದರು. ನಗರದ ದೇವರಾಜ ಮಾರುಕಟ್ಟೆಯನ್ನು ಪುನರ್ ನಿರ್ಮಿಸುವ ವಿಚಾರ ನ್ಯಾಯಾಲಯದಲ್ಲಿರುವ ಕಾರಣ ಸರ್ಕಾರ ಆದಷ್ಟು ಬೇಗ ಈ ವಿಚಾರದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!