ಪ್ರತಿಯೊಬ್ಬರು ರಾಷ್ಟ್ರ ಧ್ವಜವನ್ನು ಹಾರಿಸಿ ದೇಶ ಪ್ರೇಮವನ್ನು ಮೆರೆಯಬೇಕು: ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ

ಹೊಸದಿಗಂತ ವರದಿ ಹುಬ್ಬಳ್ಳಿ:
ಮಠಕ್ಕೆ‌ ಬರುವ ಭಕ್ತರು ಪ್ರೀತಿ, ಸ್ನೇಹ, ಹಣ್ಣು ಹಂಪಲು, ಬಂಗಾರ, ಬೆಳ್ಳಿ ಹಾಗೂ ಧನವನ್ನು ನೀಡಿದ್ದಾರೆ. ಈಗ ರಾಷ್ಟ್ರ ಧ್ವಜವನ್ನು‌ ಕೊಡುತ್ತಿರುವುದು ಈ ಎಲ್ಲದಕ್ಕೂ ಮಹತ್ವದಾಗಿದೆ ಎಂದು ಮೂರು ಸಾವಿರ ಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.

ಮಂಗಳವಾರ ನಗರದ ಮೂರು ಸಾವಿರ ಮಠದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಪ್ರತಿಯೊಬ್ಬರು ರಾಷ್ಟ್ರ ಧ್ವಜವನ್ನು ಹಾರಿಸಿ ದೇಶ ಪ್ರೇಮವನ್ನು ಮೇರೆಯಬೇಕು ಎಂದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ವಾಡ್೯ ನಂ ೬೭ ರ ಸದಸ್ಯ ಶಿವು ಮೆಣಸಿನಕಾಯಿ ಅವರ ನೇತೃತ್ವದಲ್ಲಿ ಶ್ರೀಗಳಿಗೆ ಧ್ವಜವನ್ನು ವಿತರಿಸಿದರು.
ಬಿಜೆಪಿ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಮಾಜಿ ಶಾಸಕರಾದ ಅಶೋಕ ಕಾಟವೆ, ವೀರಭದ್ರಪ್ಪ ಹಾಲಹರವಿ, ದತ್ತಮೂರ್ತಿ ಕುಲಕರ್ಣಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!